LATEST NEWS
ಮಂಗಳೂರು – ಲೈಟರ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ – ನಾಲ್ವರು ಅರೆಸ್ಟ್
ಮಂಗಳೂರು ಜನವರಿ 13 : ಸಿಗರೇಟು ಸೇದುವ ವೇಳೆ ಲೈಟರ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದ ಘಟನೆ ತಣ್ಣೀರುಬಾವಿಯ ಗಣೇಶ ಕಟ್ಟೆಯಲ್ಲಿ ನಡೆದಿದ್ದು. ಪಣಂಬೂರು ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಈ ಸಂಬಂಧ ನಾಲ್ವರು ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾರ್ತಿಕ್, ಸಂತೋಷ್, ಧನುಷ್, ಪ್ರಜ್ವಲ್ ಎಂದು ಗುರುತಿಸಲಾಗಿದೆ.
‘ವೆಂಕಟೇಶ, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಎಂಬವರು ಮದ್ಯಪಾನ ಮಾಡಿಕೊಂಡು ಸಿಗರೇಟ್ ಸೆದುತ್ತಿದ್ದ ಸಂಧರ್ಭದಲ್ಲಿ ಪ್ರೀತಂ, ಸನ್ವಿತ್ ಹಾಗೂ ಇತರರು ಸ್ಥಳಕ್ಕೆ ಬಂದು ಸಿಗರ್ ಲೈಟರ್ ಕೇಳಿದ್ದರು. ಪ್ರಜ್ವಲ್ ಸಿಗರ್ ಲೈಟರನ್ನು ಪ್ರೀತಂ ಹಾಗೂ ಇತರರಿಗೆ ನೀಡಿದ್ದ. ಅದನ್ನು ಅವರು ಮರಳಿಸದಿದ್ದಾಗ ಪ್ರಜ್ವಲ್ ಅವರನ್ನು ಪ್ರಶ್ನಿಸಿದ್ದ. ಆಗ ಆ ಗುಂಪಿನಲ್ಲಿದ್ದವನೊಬ್ಬ ಕಾರ್ತಿಕ್ ತಲೆಗೆ ಬೀಯರ್ ಬಾಟಲಿಯಿಂದ ಹೊಡೆದಿದ್ದ. ಆ ಬಳಿಕ ಎರಡು ಗುಂಪುಗಳಲ್ಲಿದ್ದವರು ಮರದ ಕೋಲುಗಳಿಂದ ಹೊಡೆದಾಡಿಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ‘ವೆಂಕಟೇಶ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಎಂಬವರು ಸೇರಿ ಹಲ್ಲೆ ನಡೆಸಿದ್ದಾರೆ’ ಎಂದು ಪ್ರೀತಂ ದೂರು ನೀಡಿದ್ದಾರೆ. ಆರೋಪಿಗಳಾದ ಕಾರ್ತಿಕ್, ಸಂತೋಷ್, ಧನುಷ್, ಪ್ರಜ್ವಲ್ ಎಂಬುವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ವೆಂಕಟೇಶ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಎಂಬವರು ಸೇರಿ ಹಲ್ಲೆ ನಡೆಸಿದ್ದಾರೆ’ ಎಂದು ಪ್ರೀತಂ ದೂರು ನೀಡಿದ್ದಾರೆ. ಅರೋಪಿಗಳಾದ ಕಾರ್ತಿಕ್, ಸಂತೋಷ್, ಧನುಷ್, ಪ್ರಜ್ವಲ್ ಎಂಬುವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರೀತಂ ಮತ್ತು ಸನ್ವಿತ್ ಹಾಗೂ ಇತರರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಪ್ರಜ್ವಲ್ ದೂರು ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಡಿ.ಸಿ.ಪಿ ಸಿದ್ದಾರ್ಥ್ ಹಾಗೂ ಸಿಸಿಬಿ ಎಸಿಪಿ ಮನೋಜ್ ನಾಯ್ಕ, ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ್ ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.