LATEST NEWS
ಮಂಗಳೂರು ಗಲಭೆಗೆ ಕಾರಣರಾದರಾ… ಸ್ಥಳೀಯ ಭಾಷೆ ತಿಳಿಯದ ಉತ್ತರ ಕರ್ನಾಟಕದ ಪೊಲೀಸ್ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು………….?
ಮಂಗಳೂರು ಗಲಭೆಗೆ ಕಾರಣರಾದರಾ… ಸ್ಥಳೀಯ ಭಾಷೆ ತಿಳಿಯದ ಉತ್ತರ ಕರ್ನಾಟಕದ ಪೊಲೀಸ್ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು………….?
ಮಂಗಳೂರು ಡಿಸೆಂಬರ್ 21: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪ ಪಡೆದು ಗಲಭೆ ಸೃಷ್ಠಿಯಾಗಿತ್ತು. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಗುಂಡೆಟಿಗೆ ಬಲಿಯಾಗಿದ್ದಾರೆ. ಮಂಗಳೂರಿನಲ್ಲಿ ಬಂದರು ಪ್ರದೇಶದಲ್ಲಿ ಬುಗಿಲೆದ್ದಿದ್ದ ಗಲಭೆ ಈಗ ಶಾಂತವಾಗಿದೆ.
ಆದರೆ ಈ ಗಲಭೆ ತಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಯಿತೇ ..? ಎಂಬ ಪ್ರಶ್ನೆ ಮೂಡಲಾರಂಭಿಸಿದೆ. 144 ಸೆಕ್ಷನ್ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಯುವ ಮಾಹಿತಿ ಪೊಲೀಸರಿಗೆ ಮೊದಲೇ ಸಿಕ್ಕಿದ್ದರೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಅದನ್ನು ಅಷ್ಟು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹೇಳಲಾಗುತ್ತಿದೆ. ಪ್ರತಿಭಟನೆ ತಡೆಯಲು ರಚಿಸಿದ ಕಾರ್ಯತಂತ್ರ ಅಧಿಕಾರಿಗಳಲ್ಲಿ ಇರುವ ಅನುಭವದ ಕೊರತೆ ಎದ್ದು ಕಾಣುತ್ತಿದೆ.
ಮಂಗಳೂರು ಹೇಳಿ ಕೇಳಿ ಅತ್ಯಂತ ಕೋಮು ಸೂಕ್ಷ್ಮ ಪ್ರದೇಶ, ಇಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದೂ ಒಂದು ಚಾಲೆಂಜ್, ಇಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆಯದೆ, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳು ಕಾರ್ಯತಂತ್ರ ರೂಪಿಸಿದ್ದರು.
ಮಂಗಳೂರು ಸೇರಿದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳಿಗೆ ಇಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕೋಮು ಸೂಕ್ಷ್ಮ ಪರಿಸ್ಥಿತಿಯ ಬಗ್ಗೆ ಕಿಂಚಿತ್ತು ಮಾಹಿತಿ ಇಲ್ಲ. ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶೇಕಡ 80 ರಷ್ಟು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉತ್ತರ ಕರ್ನಾಟಕ ಹಾಗೂ ಬಯಲು ಸೀಮೆ ಸೇರಿದಂತೆ ರಾಜ್ಯದ ಇತರೆಡೆ ಕರ್ತವ್ಯ ನಿರ್ವಹಿಸಿದ್ದಾರೆ. ಅವರಿಗೆ ಇಲ್ಲಿಯ ಭಾಷೆ, ಸಂಸ್ಕೃತಿ, ಪರಂಪರೆಯ ಬಗ್ಗೆ ಮಾಹಿತಿ ಇಲ್ಲ.
ಇಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಇಲ್ಲಿಯ ಭಾಷೆಗಳ ಬಗ್ಗೆ ತಿಳಿದಿರಬೇಕಾಗಿರುವುದು ಅತ್ಯಂತ ಮಹತ್ವದ ಸಂಗತಿ, ತುಳು, ಬ್ಯಾರಿ ಭಾಷೆ ಬಗ್ಗೆ ಇಲ್ಲಿಯ ಅಧಿಕಾರಿಗಳಿಗೆ ತಿಳಿದಿರಲೇಬೇಕಾದ ಅನಿವಾರ್ಯತೆ ಇದೆ. ಆದರೆ ಇಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ಅಧಿಕಾರಿಗಳಿಗೆ ಈ ಬಗ್ಗೆ ಕಾಯಿದೆ ವಿರೋಧಿಸಿದ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಪ್ರತಿಭಟನಾ ನಿರಂತರೊಂದಿಗೆ ಸಂಹನ ಸಾಧಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ. ಅವರ ಮನ ಬದಲಿಸಲು ಅಧಿಕಾರಿಗಳಿಂದ ಸಾಧ್ಯವಾಗಿಲ್ಲ.
ಇದೇ ಪರಿಸ್ಥಿತಿ ಮುಂದುವರಿದರೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಮತ್ತೆ ಹದಗೆಡಲಿದೆ.ಈ ಹಿನ್ನಲೆಯಲ್ಲಿ ಸರಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು . ಅದಲ್ಲದೇ ಇಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸದ ಅಧಿಕಾರಿಗಳನ್ನು ಮತ್ತೆ ಸ್ವಲ್ಪ ಸಮಯಕ್ಕಾದರೂ ಇಲ್ಲಿ ಕರ್ತವ್ಯಕ್ಕೆ ಸೂಚಿಸಬೇಕಾಗಿದೆ. ಅದಲ್ಲದೇ ಇಲ್ಲಿಯ ಭಾಷೆ, ಸಂಸ್ಕೃತಿ, ಪರಂಪರೆಯ ಬಗ್ಗೆ ಮಾಹಿತಿ ಇರುವ ಸಿಬ್ಬಂದಿಗಳನ್ನು ನಿಯೋಜಿಸುವ ಬಗ್ಗೆ ಕ್ರಮಕೈಗೊಳ್ಳುವ ಅಗತ್ಯತೆ ಇದೆ.