LATEST NEWS
ಮಂಗಳೂರು ನಗರದಾದ್ಯಂತ ಪೊಲೀಸರ ಬಿಗಿ ಬಂದೋಬಸ್ತ್ – ವಾಹನಗಳ ತಪಾಸಣೆ

ಮಂಗಳೂರು ಮೇ 06: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಬಳಿಕ ಬೂದಿ ಮುಚ್ಚಿದ ಕೆಂಡಂತಿರುವ ಮಂಗಳೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಮಂಗಳೂರು ನಗರದಲ್ಲಿ ಅಲಲ್ಲಿ ಪೊಲೀಸರು ವಾಹನ ತಪಾಸಣೆಯಲ್ಲಿ ತೊಡಗಿದ್ದಾರೆ.
ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ಗಳನ್ನು ಪ್ರಕಟಿಸಿರುವ ಕಾರಣ ಪೊಲೀಸರು ನಗರದಾದ್ಯಂದ ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.

ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು,. ನಗರದ ವಿವಿದಡೆ ವಾಹನಗಳ ತಪಾಸಣೆಯಲ್ಲಿ ತೊಡಗಿದ್ದಾರೆ. ನಗರಾದ್ಯಂತ ಪೊಲೀಸ್ ವಾಹನಗಳು ಗಸ್ತು ತಿರುಗುತ್ತಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳುತ್ತಿದ್ದಾರೆ.