Connect with us

    LATEST NEWS

    ಪುನೀತ್ ರಾಜ್ ಕುಮಾರ್ ಸ್ಮರಣೆ – ಶಿವರಾಜಕುಮಾರ್ ಜೊತೆ ಡ್ಯಾನ್ಸ್ ಮಾಡಿದ ಮಂಗಳೂರು ಪೊಲೀಸರು

    ಮಂಗಳೂರು ಮೇ 02: ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಇಂದು ಪುನೀತ್ ರಾಜ್ ಕುಮಾರ್ ಸ್ಮರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ದಂಪತಿ ಭಾಗವಹಿಸಿದ್ದರು. ಪುನೀತ್ ರಾಜ್ ಕುಮಾರ್ ಸ್ಮರಣೆ ಹಾಗೂ ಪೊಲೀಸ್ ರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿವರಾಜ್ ಕುಮಾರ್ ಅವರು ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.


    ಅಪ್ಪುವನ್ನು ಕಳೆದುಕೊಂಡಿದ್ದು ಅದು ನಮ್ಮ ಕುಟುಂಬಕ್ಕೆ ಮಾತ್ರವಲ್ಲ, ಇಡೀ ರಾಜ್ಯದ ಜನರಿಗೆ ಮರೆಯಲಾಗದ ನೋವು. ಅಪ್ಪು ಇಲ್ಲ ಎಂದು ಕೊರಗುವುದಕ್ಕಿಂತ, ಆತ ನಮ್ಮೊಡನೆ ಇದ್ದಾನೆ ಎಂತಲೇ ನಾವು ಸಂಭ್ರಮಿಸಬೇಕು. ಆ ಮೂಲಕ ನಮ್ಮೊಳಗೆ ಸಮಾಧಾನ ಕಂಡುಕೊಳ್ಳಬೇಕು’ ಎಂದು ಶಿವರಾಜ್‌ಕುಮಾರ್ ಹೇಳಿದರು.

    ಮಂಗಳೂರು ನನಗೆ ಇಷ್ಟವಾದ ಊರು. ಅಪ್ಪಾಜಿಯನ್ನು ಬಿಟ್ಟರೆ ನಮ್ಮ ಕುಟುಂಬದಲ್ಲಿ ನಾನು ನಟಿಸಿರುವ ಹೆಚ್ಚಿನ ಸಿನಿಮಾಗಳ ಶೂಟಿಂಗ್ ಇಲ್ಲಿ ನಡೆದಿದೆ. ನನಗೂ, ಪೊಲೀಸ್ ಇಲಾಖೆಗೂ ನಿಕಟ ಸಂಬಂಧ. ನಾನು ಪೊಲೀಸ್ ಪಾತ್ರದಲ್ಲಿ ನಟಿಸಿದ ಚಿತ್ರಗಳು ಯಶಸ್ಸು ಪಡೆದಿವೆ.ಮುಂದಿನ ಬಾರಿ ಮಂಗಳೂರಿನಲ್ಲಿ ‘ಅಪ್ಪು ಸೆಲೆಬ್ರೇಷನ್’ ಮಾಡೋಣ’ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply