LATEST NEWS
ಮಂಗಳೂರು ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ಮತ್ತೆ ಆರಂಭ
ಮಂಗಳೂರು ಅಗಸ್ಟ್ 16: ಲಾಕ್‍ಡೌನ್ ಹಿನ್ನೆಲೆ ಮತ್ತು ಕೊರೊನಾ ಪ್ರಕರಣಗಳ ಹೆಚ್ಚಳದಿಂದ ಕಳೆದ ತಿಂಗಳು ಸ್ಥಗಿತಗೊಳಿಸಲಾಗಿದ್ದ ಮಂಗಳೂರು ಪ್ರೆಸ್‍ನ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾಗೋಷ್ಠಿಗಳನ್ನು ಆಗಸ್ಟ್ 18ರಿಂದ ಮತ್ತೆ ಆರಂಭಿಸಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡಾ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸರಕಾರದ ನಿಯಮದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ಬಳಸಿಕೊಂಡು ಪತ್ರಿಕಾಗೋಷ್ಠಿಗಳನ್ನು ನಡೆಸಲಾಗುತ್ತದೆ. ಎಲ್ಲ ಪತ್ರಕರ್ತರು ಹಾಗೂ ಪತ್ರಿಕಾಗೋಷ್ಠಿ ನಡೆಸುವವರೂ ಮಾಸ್ಕ್ ಧರಿಸಿಕೊಂಡು ಬಂದು, ಕೊರೊನಾ ಸೋಂಕಿಗೆ ತುತ್ತಾಗದಂತೆ ಎಲ್ಲ ಸುರಕ್ಷಾ ಕ್ರಮಗಳನ್ನು ಕೈಗೊಂಡು ಸಹಕರಿಸಬೇಕು ಎಂದು ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ತಿಳಿಸಿದ್ದಾರೆ.
You must be logged in to post a comment Login