LATEST NEWS
ಮಂಗಳೂರು – ವಿಧ್ಯಾರ್ಥಿನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು – ಅಂಬ್ಯುಲೆನ್ಸ್ ಆದ ಖಾಸಗಿ ಬಸ್
ಮಂಗಳೂರು ಜುಲೈ 31: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿಧ್ಯಾರ್ಥಿನಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಬಸ್ ಚಾಲಕ ಬಸ್ ನ್ನು ಆಸ್ಪತ್ರೆಗೆ ಅಂಬ್ಯುಲೆನ್ಸ್ ರೀತಿಯಲ್ಲಿ ತೆಗೆದುಕೊಂಡು ಹೋದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಕೂಳೂರು ಮಾರ್ಗ 13ಎಫ್ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ.
ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತು ವಾಹನವನ್ನಾಗಿ ಪರಿವರ್ತಿಸಿದರು. ಬಸ್ನಲ್ಲಿದ್ದ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿದ ಅವರು ಕೇವಲ 6 ನಿಮಿಷಗಳಲ್ಲಿ 6 ಕಿಲೋಮೀಟರ್ ದೂರ ಕ್ರಮಿಸಿ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ತಲುಪಿದರು. ಕೂಡಲೇ ವಿಧ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಆಕೆಯ ಜೀವ ಉಳಿಸಿದ್ದಾರೆ.
ಸಂದರ್ಭವನ್ನು ಅರಿತುಕೊಂಡು ತಕ್ಷಣವೇ ಬಸ್ಸನ್ನು ಆಸ್ಪತ್ರೆಯತ್ತ ಚಲಾಯಿಸಿದ ಕಾರಣ ವಿದ್ಯಾರ್ಥಿಯನ್ನು ರಕ್ಷಿಸಲು ಸಾಧ್ಯವಾಯಿತು. ಪರಿಣಾಮವಾಗಿ ವಿದ್ಯಾರ್ಥಿಯ ಜೀವ ಉಳಿಯಿತು. ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆಗೆ ಮತ್ತು ಮಾನವೀಯತೆಗೆ ಇದೀಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕರಾವಳಿಯಲ್ಲಿ ಬಸ್ಸು ಚಾಲಕ ನಿರ್ವಹಕ ಶ್ರಮಿಕ ವರ್ಗ ಮಾನವೀಯತೆ ಯ ಆಗರ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.