LATEST NEWS
ಪೊಲೀಸರ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಮಂಗಳೂರು ಗೊಲಿಬಾರ್ ನಲ್ಲಿ ಮೃತಪಟ್ಟವರ ಹೆಸರು
ಪೊಲೀಸರ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಮಂಗಳೂರು ಗೊಲಿಬಾರ್ ನಲ್ಲಿ ಮೃತಪಟ್ಟವರ ಹೆಸರು
ಮಂಗಳೂರು ಡಿಸೆಂಬರ್ 23: ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರು ಸೇರಿದಂತೆ 70 ಜನರನ್ನ ಆರೋಪಿಗಳನ್ನಾಗಿ ಗುರುತಿಸಲಾಗಿದ್ದು ಎಫ್ಐಆರ್ ದಾಖಲಾಗಿದೆ.
ಬಂದರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೋಲಿಬಾರ್ ನಲ್ಲಿ ಮೃತಪಟ್ಟ ಜಲೀಲ್ ಕಂದಕ್ ಪ್ರಕರಣದ ಮೂರನೇ ಆರೋಪಿ ಹಾಗೂ ನೌಶೀನ್ 8 ನೇ ಆರೋಪಿ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಡಿಸಿಪಿ ಅರುಣ್ ವಂಶಗಿರಿ ಜಿಲ್ಲಾ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಈ ಅಂಶಗಳನ್ನು ಉಲ್ಲೇಖಿಸಲಾಗಿದೆ.
ಬಂದರು ಪರಿಸರದಲ್ಲಿ 2 ಸಾವಿರಕ್ಕೂ ಮಿಕ್ಕಿದ ಜನ ಪೋಲೀಸರ ವಿರುದ್ಧ ಕಲ್ಲು ಹಾಗೂ ಬಾಟಲಿಗಳನ್ನು ಎಸೆದು ಹಲ್ಲೆಗೆ ಮುಂದಾಗಿದ್ದರು. ಅಲ್ಲದೆ ಬಂದರು ಪೋಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪೋಲೀಸರ ಹತ್ಯೆಗೂ ಸಂಚು ರೂಪಿಸಿದ್ದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಪೋಲೀಸರು ಎಲ್ಲಾ ವಿಧದಲ್ಲೂ ಪ್ರಯತ್ನಿಸಿದ್ದರು ಎನ್ನುವ ವಿಚಾರವನ್ನೂ ವರದಿಯಲ್ಲಿ ಉಲ್ಲಖಿಸಲಾಗಿದೆ.
ಪ್ರತಿಭಟನೆ ಹಾಗೂ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಡಿ.ಪಿ.ಐ ಹಾಗೂ ಪಿಎಫ್ಐ ವಿರುದ್ಧ ಪ್ರತ್ಯೇಕ ಪ್ರಕರಣವನ್ನು ದಾಖಲಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ ವಾಟ್ಸ್ ಅಪ್ ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ ಎಸ್.ಡಿ.ಪಿ.ಐ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್.ಎಚ್ ವಿರುದ್ಧ ಕದ್ರಿ ಪೋಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.