Connect with us

    LATEST NEWS

    ಸುಳ್ಳು ಸುದ್ದಿ ನಂಬಿ ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಸೇರಿದ ಸಾವಿರಾರು ವಲಸೆ ಕಾರ್ಮಿಕರು

    ಸುಳ್ಳು ಸುದ್ದಿ ನಂಬಿ ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಸೇರಿದ ಸಾವಿರಾರು ವಲಸೆ ಕಾರ್ಮಿಕರು

    ಮಂಗಳೂರು ಮೇ.08:ಸುಳ್ಳು ಸುದ್ದಿ ನಂಬಿ ಸಾವಿರಾರು ವಲಸೆ ಕಾರ್ಮಿಕರು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿರುವ ಘಟನೆ ಇಂದು ನಡೆದಿದೆ. ಉತ್ತರ ಭಾರತದ ಸುಮಾರು 1000 ಕ್ಕೂ ಅಧಿಕ ಮಂದಿ ವಲಸೆ ಕಾರ್ಮಿಕರು ಮಂಗಳೂರಿನಿಂದ ತಮ್ಮ ಊರುಗಳಿಗೆ ತೆರಳಲು ಉಚಿತ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಂದ ಸುಳ್ಳು ಮಾಹಿತಿಯನ್ನು ನಂಬಿ ಆಗಮಿಸಿದ್ದರು.

    ಕೂಳೂರು, ಸುರತ್ಕಲ್, ಬೈಕಂಪಾಡಿಯಿಂದ ಬಂದಿರುವ ಈ ಕಾರ್ಮಿಕರು ರೈಲಿನ ಮೂಲಕ ರಾಜಸ್ಥಾನ, ಬಿಹಾರ, ಉತ್ತರಪ್ರದೇಶಗಳಿಗೆ ಕಳುಹಿಸುವಂತೆ ಪಟ್ಟು ಹಿಡಿದಿದ್ದಾರೆ.ಕಾರ್ಮಿಕರನ್ನು ಉಚಿತವಾಗಿ ರೈಲಿನ ಮೂಲಕ ಕಳುಹಿಸಲಾಗುತ್ತಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದನ್ನು ನೋಡಿದ ಕಾರ್ಮಿಕರು ರೈಲು ನಿಲ್ದಾಣಕ್ಕೆ ಬಂದಿದ್ದಾರೆ.ನಮ್ಮನ್ನು ಊರಿಗೆ ಕಳುಹಿಸಿಕೊಡಿ.

    ಕೆಲಸವೂ ಇಲ್ಲ, ಆದಾಯವೂ ಇಲ್ಲದಾಗಿದೆ ಎಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿರುವ ಅಧಿಕಾರಿಗಳು, ಕಾರ್ಮಿಕರ ಮನವೊಲಿಕೆ ಮಾಡುತ್ತಿದ್ದಾರೆ. ಮೂರು ದಿನದಲ್ಲಿ ರೈಲಿನ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಸೇರಿರುವ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾದ ಪರಿಸ್ಥಿತಿ ಬಂದೊದಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply