LATEST NEWS
ಮಂಗಳೂರು – ಕರಾವಳಿಯಲ್ಲಿ ಉತ್ತಮ ಮಳೆ….
ಮಂಗಳೂರು ಜೂನ್ 10: ಚಂಡಮಾರುತದ ಬೆನ್ನಲ್ಲೇ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿಪೊರ್‌ಜೋಯ್’ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಮೂರು ರಾಜ್ಯಗಳಲ್ಲಿ ಭಾರೀ ಮಳೆ, ಎಚ್ಚರಿಕೆ: ಚಂಡಮಾರುತವು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯನ್ನು ಉಂಟುಮಾಡಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಮಂಗಳೂರು ನಗರದಲ್ಲಿ ಇಂದು ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದೆ. ಬೆಳಿಗ್ಗೆ ಅಲ್ಪ ಮಳೆಯಾಗಿತ್ತು. 10 ಗಂಟೆಯ ವೇಳೆಗೆ ಉತ್ತಮ ಮಳೆ ಸುರಿಯಿತು. ಮುಂದಿನ ಮೂರು ಗಂಟೆಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಕೋಲಾರ, ಉಡುಪಿ, ಉತ್ತರ ಕನ್ನಡದ ಒಂದು ಅಥವಾ ಎರಡು ಸ್ಥಳಗಳಲ್ಲಿ 30–40 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ‘ಬಿಪೊರ್‌ಜೋಯ್’ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್‌ನಿಂದ ನೈಋತ್ಯಕ್ಕೆ 640 ಕಿಮೀ ದೂರದಲ್ಲಿ ನೆಲೆಸಿರುವ ಚಂಡಮಾರುತವು ಗಂಟೆಗೆ 145 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಸಮುದ್ರ ತೀರಕ್ಕೆ ಜನರ ತೆರಳುವುದಂತೆ ತಿಳಿಸಲಾಗಿದೆ.