LATEST NEWS
ಮಂಗಳೂರು ಮಳೆಗೆ ಕೆರೆಯಂತಾದ ಪಂಪ್ ವೆಲ್…!!

ಮಂಗಳೂರು ಜುಲೈ 03: ಮಂಗಳೂರಿನಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ನಗರದ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಉಂಟಾಗಿದೆ.
ನಗರದಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ನಗರದ ಪಂಪ್‌ವೆಲ್ ಜಲಾವೃತಗೊಂಡಿವೆ. ಇದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಪೊಲೀಸರು ಈ ರಸ್ತೆಯಲ್ಲಿ ವಾಹನಗಳು ಚಲಿಸದಂತೆ ತಡೆ ಹಿಡಿದಿದ್ದಾರೆ.

ನಗರದ ಬಿಜೈನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ದುರಸ್ತಿಗಾಗಿ ಮ್ಯಾನ್ ಹೋಲ್ ಅಗೆದಿಟ್ಟುರುವುದ್ದರಿಂದ ಭಾರೀ ಮಳೆಯಿಂದಾಗಿ ಗಲೀಜು ನೀರಿನ ಜತೆ ಮಳೆ ನೀರು ಸುತ್ತಮುತ್ತಲಿನ ಬ್ಯಾಂಕ್, ಮೆಡಿಕಲ್‌ನೊಳಗೆ ನುಗ್ಗಿ ಅವಾಂತರ ಸೃಷ್ಟಿಯಾಯಿತು. ಹೋಟೇಲ್ ಹಾಗೂ ಮೆಡಿಕಲ್‌ಗಳಿಗೂ ಗಲೀಜು ನೀರು ನುಗ್ಗಿ ಸಮಸ್ಯೆಯಾಯಿತು. ನಗರದ ಕೆಎಸ್ ರಾವ್ ರಸ್ತೆ, ಎಂಜಿ ರಸ್ತೆ, ಪಾಂಡೇಶ್ವರ ಪ್ರದೇಶಗಳು ನೀರಿನಿಂದ ಜಲಾವೃತಗೊಂಡವು.
https://youtu.be/lg_kbxRTxPg