LATEST NEWS
ಮಂಗಳೂರು – ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-2ಗೆ ಚಾಲನೆ

ಮಂಗಳೂರು ಜನವರಿ 24: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-2 ಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಅದ್ದೂರಿ ವೇದಿಕೆಯಲ್ಲಿ ಚಾಲನೆ ದೊರೆತಿದೆ.
ಸ್ಪೀಕರ್ ಯು.ಟಿ ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರು ದೀಪ ಪ್ರಜ್ವಲನೆಗೊಳಿಸುವ ಮೂಲಕ ಅಧಿಕೃತ ಚಾಲನೆ ನೀಡಿ ಶುಭ ಹಾರೈಸಿದರು. “ಸ್ಟ್ರೀಟ್ ಫುಡ್ ಫಿಯೆಸ್ಟ” ಗೆ ಆರಂಭದಲ್ಲಿಯೇ ಆಹಾರ ಪ್ರಿಯರಿಂದ ನಿರೀಕ್ಷೆಗೂ ಮೀರಿ ಜನ ಸ್ಪಂದನೆ ಸಿಕ್ಕಿದ್ದು ಜನವರಿ 28ರ ವರೆಗೆ ಪ್ರತಿನಿತ್ಯ ಸಂಜೆ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ತುಳುನಾಡ ಹಾಗೂ ರಾಜ್ಯ-ದೇಶದ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಉತ್ಸವ ನಡೆಯಲಿದೆ ಎಂದು ಆಯೋಜಕರು ತಿಳಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಗಿರಿಧರ್ ಶೆಟ್ಟಿ ಸಹಿತ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಪದಾಧಿಕಾರಿಗಳು ಹಾಗೂ ಬಿಜೆಪಿಯ ಕಾರ್ಪೊರೇಟರ್ ಗಳು, ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.