LATEST NEWS
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಜಯಂತ್ ಎಸ್ ಕುಂಪಲ

ಮಂಗಳೂರು ಸೆಪ್ಟೆಂಬರ್ 04: ವ್ಯಕ್ತಿಯೊಬ್ಬರು ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದ್ದು, ಮೃತರನ್ನು ಕುಂಪಲ ಹನುಮಾನ್ ನಗರದ ಹಿಂದೂ ಕಾರ್ಯಕರ್ತ ಜಯಂತ್ ಎಸ್. ಕುಂಪಲ (49) ಎಂದು ಗುರುತಿಸಲಾಗಿದೆ.
ಹಿಂದೂ ಯುವ ಸೇನೆಯ ಸಕ್ರಿಯ ಕಾರ್ಯಕರ್ತರಾಗಿದ್ದ ಅವರು, ಅಟೋ ರಿಕ್ಷಾ ಓಡಿಸಿ ಜೀವನ ಸಾಗಿಸುತ್ತಿದ್ದರು. ಹನುಮಾನ್ ನಗರದಲ್ಲಿ ಹೊಸ ಮನೆ ನಿರ್ಮಿಸುತ್ತಿದ್ದರು. ಸಂಜೆ ಪತ್ನಿ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
