Connect with us

    LATEST NEWS

    ಮಂಗಳೂರಿನಲ್ಲಿ ಕಟ್ಟುನಿಟ್ಟಿನ ಸಂಡೇ ಲೌಕ್ ಡೌನ್

    ಮಂಗಳೂರು ಜುಲೈ 19 : ಮಂಗಳೂರು ಕೊರೊನಾ ಸೊಂಕು ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಒಂದು ವಾರದ ಲಾಕ್ ಡೌನ್ ಹೇರಲಾಗಿದೆ. ಈ ವಾರದ ಲಾಕ್ ಡೌನ್ ನಡುವೆ ಇಂದು ಸಂಡೇ ಲಾಕ್ ಡೌನ್ ವಿಧಿಸಲಾಗಿದ್ದು, ಇಂದು ಭಾನುವಾರದ ಲಾಕ್ ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಇಂದು ಮುಂಜಾನೆಯಿಂದಲೇ ಜಿಲ್ಲೆ ಬಹುತೇಕ ಸ್ಥಬ್ದವಾಗಿದೆ.


    ಹಾಲು, ಮೆಡಿಕಲ್, ತುರ್ತು ಸೇವೆ ಗಳಿಗೆ ವಿನಾಯತಿ ನೀಡಲಾಗಿದೆ. ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಮಾರುಕಟ್ಟೆ ಪ್ರದೇಶಗಳು ಜನರು ವ್ಯಾಪಾರಿಗಳಿಲ್ಲದೆ ಬಿಕೋ ಎನ್ನುತ್ತಿವೆ. ಲಾಕ್ ಡೌನ್ ಇದ್ದರೂ ಬೆಳಿಗ್ಗೆ ತರಕಾರಿ ಸೇರಿದಂತೆ ಅಗತ್ಯ ಸಾಮಗ್ರಿ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ ಇಂದು ಅದಕ್ಕೆ ಅನುಮತಿ ನೀಡಲಾಗಿಲ್ಲ. ಬೆಳಿಗ್ಗೆ 11ರ ವರೆಗೆ ಹಾಲು ಖರೀದಿಗೆ ಅವಕಾಶ ನೀಡಲಾಗಿದೆ. ಮಂಗಳೂರು ನಗರ ಪ್ರವೇಶಿಸಲು ನಿರ್ಬಂಧ ವಿಧಿಸಲಾಗಿದ್ದು, ನಗರದ ಹಲವೆಡೆ ನಾಕಾಬಂಧಿ ಮಾಡಿ ಬಂದೋಬಸ್ತು ಮಾಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply