MANGALORE
ದಕ್ಷಿಣಕನ್ನಡ ಜಿಲ್ಲೆಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸಾಮೂಹಿಕ ಧರಣಿ
ಮಂಗಳೂರು ಫೆಬ್ರವರಿ 05: ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದುಹೋಗುವ ನಾಲ್ಕು ಹೆದ್ದಾರಿಗಳು ಸಮಸ್ಯೆಯ ಆಗರವಾಗಿದ್ದು, ಶೀಘ್ರವೇ ಸಮಸ್ಯೆಗಳನ್ನು ಪರಿಹರಿಸಬೇಕು, ಹೆದ್ದಾರ ಅಗಲೀಕರಣ ಕಾಮಗಾರಿಗಳು ಶರವೇಗದಲ್ಲಿ ಪೂರ್ಣಗೊಳಿಸಬೇಕು, ನಂತೂರು ಮೇಲ್ಸೇತುವೆ, ಕೂಳೂರು ಸೇತುವೆ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ತಿಗೊಳಿಸಬೇಕು, ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವುಗೊಳಿಸಬೇಕು, ಹೊಸ ಟೋಲ್ ಗೇಟ್ ಗಳನ್ನು ಸ್ಥಾಪಿಸುವಾಗ ಅಂತರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಮುಂತಾದ ಬೇಡಿಕೆಗಳನ್ನು ಮುಂದಿಟ್ಟು “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ನೇತೃತ್ವದಲ್ಲಿ ನಂತೂರು ಜಂಕ್ಷನ್ ನಲ್ಲಿ ಸಾಮೂಹಿಕ ಧರಣಿ ನಡೆಯಿತು.
ಜಿಲ್ಲೆಯ ಹಲವು ಜನಪರ ಸಂಘಟನೆಗಳು ಧರಣಿಯಲ್ಲಿ ಭಾಗಿಯಾಗಿ ಬೆಂಬಲ ವ್ಯಕ್ತಪಡಿಸಿದರು, ಹೆದ್ದಾರಿಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳ ಮೇಲೆ ನಡೆದ ಧರಣಿಗೆ ನಾಗರಿಕರಿಂದ ಬೆಂಬಲ ವ್ಯಕ್ತವಾಯಿತು. ಧರಣಿಯ ತರುವಾಯ, ದ.ಕ. ಜಿಲ್ಲೆಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಮಂಗಳೂರಿನಲ್ಲಿ ಹೆದ್ದಾರಿ ಪ್ರಾಧಿಕಾರದ ವಿಶೇಷ ಸಭೆ ಕರೆಯುವಂತೆ ಆಗ್ರಹಿಸಿ ಲೋಕೋಪ ಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಪತ್ರವನ್ನು ಕಳುಹಿಸಿ ಕೊಡಲಾಯಿತು.
ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಸಾಮೂಹಿಕ ಧರಣಿ ಉದ್ಘಾಟಿಸಿದರು, ಮಾಜಿ ಸಚಿವ ಬಿ ರಮಾನಾಥ ರೈ ಸಮಾರೋಪ ಭಾಷಣ ಮಾಡಿದರು.