LATEST NEWS
ಮಂಗಳೂರು – ತಿರುವನಂತಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ

ತಿರುವನಂತಪುರ ಜನವರಿ 17: ಮಂಗಳೂರು – ತಿರುವನಂತಪುರ ಎಕ್ಸ್‌ಪ್ರೆಸ್ ರೈಲಿನ ಪಾರ್ಸೆಲ್ ಬೋಗಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ಸಾಂದರ್ಭಿಕ ಚಿತ್ರ
ಮಂಗಳೂರು-ತಿರುವನಂತಪುರ ಮಲಬಾರ್ ಎಕ್ಸ್‌ಪ್ರೆಸ್ ರೈಲಿನ ಪಾರ್ಸೆಲ್ ವ್ಯಾನ್‌ನಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಕೇರಳ ರಾಜಧಾನಿ ತಿರುವನಂತಪುರ ತಲುಪಲು 40 ಕೀ.ಮೀ.ಗಳಷ್ಟೇ ದೂರದಲ್ಲಿರುವಾಗ ವರ್ಕಳದಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಬಳಿಕ ಸ್ಥಳಕ್ಕೆ ತಲುಪಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.
