LATEST NEWS
ಗಡಿ ಬಂದ್ – ಮಂಗಳೂರು ವಿವಿ ಪದವಿ ಪರೀಕ್ಷೆ ಹಾಗೂ ತರಗತಿ ತಾತ್ಕಾಲಿಕ ರದ್ದು
ಮಂಗಳೂರು ಅಗಸ್ಟ್ 03: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿಸಿದ್ದಾರೆ.
ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣ ದಾಖಲಾಗುತ್ತಿದ್ದು, ರಾಜ್ಯ ಸರಕಾರ ಈಗಾಗಲೇ ಗಡಿಗಳಲ್ಲಿ ಜಿಲ್ಲೆಗೆ ಪ್ರವೇಶಿಸುವವರ ಪರಿಶೀಲನೆಗೆ ಆದೇಶಿಸಿದೆ. ಅಲ್ಲದೆ ಗಡಿ ಭಾಗಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ಕೆಲವು ನಿರ್ಬಂಧಗಳನ್ನು ಹೇರಿದೆ.
ಇನ್ನು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಸರಗೋಡಿನ ವಿಧ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಕಲಿಯುತ್ತಿದ್ದು, ನೆರೆಯ ರಾಜ್ಯ ಕೇರಳದಿಂದ ವಿಧ್ಯಾರ್ಥಿಗಳು ಓಡಾಟ ನಡೆಸುವುದರಿಂದ ವ್ಯಕ್ತಿಯಿಂದ ವ್ಯಕ್ತಿಗೆ ಕೊರೊನಾ ಸೊಂಕು ಹರಡುವ ಸಾಧ್ಯತೆ ಇದೆ. ಈ ಹಿನ್ನಲೆ ಸಂಭ್ಯಾವ್ಯ ಅಪಾಯ ತಪ್ಪಿಸಲು ದಕ್ಷಿಣಕನ್ನಡ ಜಿಲ್ಲಾಡಳಿತ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಮುಂದಿನ ಆದೇಶದವರೆಗೆ ತರಗತಿ ಹಾಗೂ ಪರೀಕ್ಷೆಗಳನ್ನು ಮುಂದೂಡುವಂತೆ ಆದೇಶಿಸಿದ್ದಾರೆ.