DAKSHINA KANNADA
ಮಂಗಳೂರು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರ ಆಯ್ಕೆಗೆ ಆನ್‍ಲೈನ್ ಅರ್ಜಿ ಆಹ್ವಾನ
ಮಂಗಳೂರು,ಆಗಸ್ಟ್.17 : 2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ, ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ವಿವಿಧ ವಿಷಯಗಳಿಗೆ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಪಡೆದಿರುವ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಜಿ ಸಲ್ಲಿಸಬಹುದು. ಅರ್ಹರು ತಮ್ಮ ಅರ್ಜಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ https://www.mangaloreuniversity.ac.in ಮೂಲಕ ಆ.28 ರೊಳಗೆ ಪೂರ್ಣ ದಾಖಲೆಗಳೊಂದಿಗೆ (ಸ್ವಯಂ ದೃಢೀಕೃತ) ಸಲ್ಲಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದ ಯಾವುದೇ ಘಟಕ ಕಾಲೇಜುಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು. ಈ ಕುರಿತು ವಿಶ್ವವಿದ್ಯಾನಿಲಯದ ತೀರ್ಮಾನವೇ ಅಂತಿಮವಾಗಿರುತ್ತದೆ.
ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ಶುಲ್ಕ ರೂ. 250/- (SC/ST/Cat-1 ಅಭ್ಯರ್ಥಿಗಳಿಗೆ ರೂ.125/) ನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ https://www.mangaloreuniversity.ac.in ನಲ್ಲಿರುವ ಆನ್‍ಲೈನ್ ಪೇಮೆಂಟ್ ಮೂಲಕ PÀ “005/60-Guest Faculty Application fee” ಎಂಬ ಲೆಕ್ಕಶೀರ್ಷಿಕೆಗೆ ಲಿಂಕ್ ಮುಖಾಂತರ ಪಾವತಿಸಿ e-ಖeಛಿeiಠಿಣ ಅನ್ನು ಅರ್ಜಿಯೊಂದಿಗೆ ತಪ್ಪದೇ ಅಪ್ಲೋಡ್ ಮಾಡಬೇಕು.
ಸಂದರ್ಶನದ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ https://www.mangaloreuniversity.ac.in ನಲ್ಲಿ ಪ್ರಕಟಿಸಲಾಗುವುದು. ನಿಗದಿತ ಶುಲ್ಕ ಪಾವತಿಸದ ಹಾಗೂ ಅಪೂರ್ಣ ದಾಖಲೆಗಳನ್ನು ಅಪ್ಲೋಡ್ ಮಾಡಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅವಶ್ಯಕತೆ ಇದ್ದಲ್ಲಿ ಮಾತ್ರ ಅಗತ್ಯವಿರುವ ಸಂಖ್ಯೆಯ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ವಿಶ್ವವಿದ್ಯಾನಿಲಯ ಕಾಯ್ದಿರಿಸಿದೆ ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಕಡಿಮೆಯಾದ ಮಳೆ ಅಬ್ಬರ, ಗಿರಿಶಿಖರಗಳ ಚಾರಣ ನಿಷೇಧ ಆದೇಶ ಹಿಂಪಡೆದ ಜಿಲ್ಲಾಡಳಿತ..!