Connect with us

    LATEST NEWS

    ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೋ.ಕೆ ಬೈರಪ್ಪ ಹೃದಯಾಘಾತದಿಂದ ನಿಧನ

    ಮಂಗಳೂರು ಜುಲೈ 31: ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಬೈರಪ್ಪ ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

    ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಹೃದಯಾಘಾತವಾಗಿದೆ. ಪ್ರೊ.ಕೆ.ಬೈರಪ್ಪ ಅವರು 2014ರ ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಎಂಟನೇ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ಬಳಿಕ ಅವರು ಆದಿಚುಂಚಗಿರಿ ವಿವಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply