LATEST NEWS
ಮತ್ತೆ ಓಡಾಟ ಆರಂಭಿಸಲಿದೆ ಮಂಗಳೂರು – ವಿಜಯಪುರ ರೈಲು – ರೈಲಿನ ವೇಳಾಪಟ್ಟಿ ಬದಲಾವಣೆಗೆ ನಳಿನ್ ಕುಮಾರ್ ಕಟೀಲ್ ಮನವಿ
ಮಂಗಳೂರು ಅಗಸ್ಟ್ 24: ಕೊರೊನಾ ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಮಂಗಳೂರು – ವಿಜಯಪುರ ಎಕ್ಸ್ ಪ್ರೆಸ್ ರೈಲು ಮತ್ತೆ ಶುರವಾಗಲಿದ್ದು, ವೇಳಾಪಟ್ಟಿಯನ್ನು ಪರಿಷ್ಕರಿಸುವಂತೆ ಸಂಸದ ನಳಿನ್‌ಕುಮಾರ್ ಕಟೀಲ್, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಮನವಿ ಮಾಡಿದ್ದಾರೆ.
ಈ ಮೊದಲು ಈ ರೈಲು ಮಂಗಳೂರು ಜಂಕ್ಷನ್ ನಿಲ್ದಾಣಕ್ಕೆ ಮಧ್ಯಾಹ್ನ 12.40ಕ್ಕೆ ಬರಲಿದ್ದು, ಸಂಜೆ 4.30ಕ್ಕೆ ಇಲ್ಲಿಂದ ಹೊರಡುತಿತ್ತು, ಈ ವೇಳಾಪಟ್ಟಿಯಿಂದ ಕರಾವಳಿಯ ಜನರಿಗೆ ತೊಂದರೆ ಆಗಲಿದೆ. ಈಗಾಗಲೇ ರೈಲ್ವೆ ಬಳಕೆದಾರರ ಸಂಘ, ಸಾರ್ವಜನಿಕರಿಗೆ ನೈರುತ್ಯ ರೈಲ್ವೆಗೆ ಮನವಿ ಸಲ್ಲಿಸಲಾಗಿದ್ದು, ವೇಳಾಪಟ್ಟಿ ಪರಿಷ್ಕರಿಸುವಂತೆ ವಿನಂತಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳೂರು–ವಿಜಯಪುರ ರೈಲಿನ ವೇಳಾಪಟ್ಟಿ ಪರಿಷ್ಕರಿಸಬೇಕು. ಈ ರೈಲು ಬೆಳಿಗ್ಗೆ 9.30ಕ್ಕೆ ಮಂಗಳೂರು ಜಂಕ್ಷನ್ ತಲುಪಬೇಕು. ಸಂಜೆ 5.30ಕ್ಕೆ ಇಲ್ಲಿಂದ ಹೊರಡುವಂತೆ ಮಾಡಬೇಕು. ಈ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದ್ದಾರೆ. ಈ ವೇಳಾಪಟ್ಟಿಯಲ್ಲಿ ರೈಲು ನಿಲುಗಡೆಗೆ ಅನಾನುಕೂಲ ಆದಲ್ಲಿ, ರೈಲನ್ನು ಬಂದರಿನ ಗೂಡ್‌ಶೆಡ್ ಯಾರ್ಡ್ ಅಥವಾ ಉಳ್ಳಾಲ ನಿಲ್ದಾಣ ಗಳಲ್ಲಿ ನಿಲುಗಡೆ ಮಾಡಲು ಅವಕಾಶ ವಿದೆ. ಸಮಯಕ್ಕೆ ಸರಿಯಾಗಿ ಹೊರ ಡುವ ನಿಲ್ದಾಣಕ್ಕೆ ತರಬಹುದಾಗಿದೆ ಎಂದು ಸಲಹೆ ನೀಡಿದ್ದಾರೆ.
ಮಂಗಳೂರಿನಿಂದ ನೇರವಾಗಿ ಚೆನ್ನೈಗೆ ರೈಲು ಸಂಚಾರ ಆರಂಭಿಸಬೇಕು. ಮಂಗಳೂರು–ಹಾಸನ– ಬೆಂಗಳೂರು ಮಾರ್ಗವಾಗಿ ಚೆನ್ನೈಗೆ ರೈಲು ಓಡಿಸಬೇಕು ಎಂದು ನಳಿನ್‌ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.