LATEST NEWS
ಮಂಗಳೂರು ವಿವಿ ಕಾಲೇಜಿನಲ್ಲಿ ಮುಂದುವರಿದ ಹಿಜಬ್ ವಿವಾದ…ಹಿಜಬ್ ಧರಿಸಿ ಬಂದ ವಿಧ್ಯಾರ್ಥಿನಿಯರಿಗೆ ನೋ ಎಂಟ್ರಿ

ಮಂಗಳೂರು ಮೇ 30: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈಗಾಗಲೇ ಕಾಲೇಜ್ ಕ್ಯಾಂಪಸ್ ನಲ್ಲಿ ಹಿಜಬ್ ನಿಷೇಧಿಸಿ ಕಾಲೇಜು ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದ್ದರು, ಕೂಡಲ ಕೆಲ ವಿಧ್ಯಾರ್ಥಿನಿಯರು ಮತ್ತೆ ಹಿಜಬ್ ಧರಿಸಿ ಬಂದು ತರಗತಿ ಪ್ರವೇಶಕ್ಕೆ ಅವಕಾಶ ನೀಡಲು ಮನವಿ ಮಾಡಿದ್ದಾರೆ.
ಇಂದು ಮತ್ತೆ ಕೆಲವು ವಿಧ್ಯಾರ್ಥಿನಿಯರು ಹಿಜಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಆದರೆ ಹಿಜಬ್ ತೊಟ್ಟು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಪ್ರಾಂಶುಪಾಲರು ಅವಕಾಶ ನಿರಾಕರಿಸಿದ್ದಾರೆ.

ಇಂದರಿಂದಾಗಿ 12 ವಿಧ್ಯಾರ್ಥಿನಿಯರು ಜಿಲ್ಲಾಧಿಕಾರಿಗೆ ಮನವಿ ನೀಡಿಲು ಡಿಸಿ ಕಚೇರಿಗೆ ಆಗಮಿಸಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು ಸಭೆಯಲ್ಲಿದ್ದ ಕಾರಣ ವಿಧ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾದು ಕುಳಿತಿದ್ದರು. ಬಳಿಕ ಸಭೆ ಮುಗಿಸಿ ಬಂದ ಜಿಲ್ಲಾಧಿಕಾರಿಗಳು ವಿಧ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿದ್ದಾರೆ.