Connect with us

LATEST NEWS

ಕಾಟಿಪಳ್ಳ – ಬೈಕ್ ನಲ್ಲಿ ಬಂದು ಯುವಕನಿಗೆ ಚೂರಿ ಇರಿತ

ಮಂಗಳೂರು ಜನವರಿ 28: ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ಬಳಿಯ ಕಾಟಿಪಳ್ಳದ ಗಣೇಶಪುರದಲ್ಲಿ ನಡೆದಿದೆ.


ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಚೂರಿ ಇರಿತಕ್ಕೆ ಒಳಗಾದ ಯುವಕನ್ನು ಜಾಬಿರ್ ಎಂದು ಗುರುತಿಸಲಾಗಿದೆ. ಇವರು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಜಾಬೀರ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.