LATEST NEWS
ಮಂಗಳೂರು: ಬಂದರ್ ರಸ್ತೆಯಲ್ಲಿ ಅಪಘಾತ, ಬೆಂಗ್ರೆ ಶಾಲಾ ಶಿಕ್ಷಕಿ ಮೃತ್ಯು..!

ಮಂಗಳೂರು : ಶಾಲಾ ಶಿಕ್ಷಿಯೋರ್ವರು ಮಂಗಳೂರು ನಗರದ ಬಂದರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಬೆಂಗರೆಯ ಖಾಸಗಿ ಶಾಲೆ ಶಿಕ್ಷಕಿ ಕೆ.ಪಿ.ಶಾಹೀದಾ (ಕುಂಜೂರು) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶುಕ್ರವಾರ ಬೆಳಗ್ಗೆ ನಗರದ ಬಂದರ್ ನಲ್ಲಿ ಸಂಭವಿಸಿದ ಅಕ್ಟೀವಾ – ಕಾರು ಅಪಘಾತದಲ್ಲಿ ಶಿಕ್ಷಕಿ ಶಾಹೀದಾ ಮೃತಪಟ್ಟಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಕಸಬಾ ಬೆಂಗರೆಯ ಮುಹಿಯ್ಯುದ್ದೀನ್ ಜುಮಾ ಮಸೀದಿಯ ಬಳಿ ದಫನ ಭೂಮಿಯಲ್ಲಿ ರಾತ್ರಿ ಅಂತ್ಯಕ್ರಿಯೆ ನಡೆಸಲಾಯಿತು.ಮೂಲತಃ ಪುತ್ತೂರಿನ ಪರ್ಲಡ್ಕ ಸಮೀಪದ ಕುಂಜೂರು ನಿವಾಸಿಯಾಗಿದ್ದ ಪ್ರಸ್ತುತ ಬೆಂಗರೆ ನಿವಾಸಿಯಾಗಿರುವ ಬಹುಃ ಕೆ.ಪಿ.ಇಸ್ಮಾಯಿಲ್ ಉಸ್ತಾದ್ ರವರ ಮಗಳು.

ಉಳ್ಳಾಲ ಪೊಲೀಸ್ ಠಾಣೆಯ ಎಎಸ್ಸೈ ಮುಹಮ್ಮದ್ ಅವರ ಪತ್ನಿಯಾಗಿರುವ ಶಾಹಿದಾ ಒಬ್ಬ ಪುತ್ರ ಮತ್ತು ಇಬ್ಬರು ಹೆಣ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಮುಹಮ್ಮದ್ ಅವರು ಪಾವೂರು ಗ್ರಾಮದ ಇನೋಳಿಯವರಾಗಿದ್ದು, ಶಾಹಿದಾ ಕಸಬಾ ಬೆಂಗರೆಯ ನಿವಾಸಿಯಾಗಿದ್ದರು. ಮುಹಮ್ಮದ್ ಮತ್ತು ಶಾಹಿದಾ ದಂಪತಿಯು ಪಿಲಾರು ಸಮೀಪದ ದಾರಂದಬಾಗಿಲು ಎಂಬಲ್ಲಿ ವಾಸವಾಗಿದ್ದರು.ಕಳೆದ 8 ವರ್ಷದಿಂದ ಕಸಬಾ ಬೆಂಗರೆಯ ಎಆರ್‌ಕೆ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶಾಹಿದಾ ಶುಕ್ರವಾರ ಬೆಳಗ್ಗೆ ತನ್ನ ಮನೆಯಿಂದ ಶಾಲೆಗೆ ತೆರಳುವಾಗ ಬಂದರ್‌ನಲ್ಲಿ ಈ ಅಪಘಾತ ನಡೆದಿತ್ತು.
ಜಮಾಅತೆ ಇಸ್ಲಾಮೀ ಹಿಂದ್‌ನ ಮಹಿಳಾ ಸಂಘಟನೆಯಲ್ಲಿದ್ದ ಇವರು ಸಮಾಜ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವುದು, ಕಲಿಕೆಯಲ್ಲಿ ತೀರಾ ಹಿಂದುಳಿದಿದ್ದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿ ನೀಡುವುದು, ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು, ವಿದ್ಯಾರ್ಥಿವೇತನ ದೊರಕಿಸಿಕೊಡುವುದು ಇತ್ಯಾದಿಯಾಗಿ ಸಮಾಜ ಸೇವೆಯಲ್ಲಿ ನಿರತರಾಗಿದ್ದರು.ಮಂಗಳೂರು ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲೂ ಇವರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಸ್ಪರ್ಧಿಸಿದ್ದರು.
ಶಾಹಿದಾ ಟೀಚರ್ ನಿಧನ, ಮುಸ್ಲಿಮ್ ಒಕ್ಕೂಟ ತೀವ್ರ ಸಂತಾಪ
ಶಾಹಿದಾ ಟೀಚರ್ ನಿಧನಕ್ಕೆ ಮುಸ್ಲಿಮ್ ಒಕ್ಕೂಟ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಸಾಮಾಜಿಕ ಕಾಳಜಿ ಹೊಂದಿದ್ದ ಶಾಹಿದಾ ಟೀಚರ್ ರವರು ಮಹಿಳಾ ಮತ್ತು ಮಕ್ಕಳ ಸಂಬಂಧಿ ವಿಷಯಗಳ ಬಗ್ಗೆಗಿನ ಅನೇಕ ಹಿತಾಸಕ್ತಿ ಹೋರಾಟದ ಭಾಗವಹಿಸಿದ್ದರು. ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಉಂಟಾಗಲಿ ಎಂದು ಮಾಜಿ ಮೇಯರ್ ಹಾಗೂ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅದ್ಯಕ್ರಾದ ಕೆ ಅಶ್ರಫ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.