Connect with us

  DAKSHINA KANNADA

  ಉಳ್ಳಾಲ : ಯುವಕನ ಕೊಲೆ ಯತ್ನ ಪ್ರಕರಣದ ಆರೋಪಿ ನಮೀರ್ ಹಂಝ ಸೆರೆ..!

  ಮಂಗಳೂರು ಪೊಲೀಸ್ ಕಮಿಷನರೇಟ್‌ ನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

  ಉಳ್ಳಾಲ : ಮಂಗಳೂರು ಪೊಲೀಸ್ ಕಮಿಷನರೇಟ್‌ ನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

  ನಮೀರ್ ಹಂಝ @ ಸಮೀರ್ ಹಂಝ @ ದಾಸ್ (39) ಬಂಧಿತ ಆರೋಪಿಯಾಗಿದ್ದಾನೆ.

  ಘಟನೆಯ ವಿವರ :

  12-08-2023 ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರಲ್ಲಿ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಮೀರ್ ಹಂಸ ಎಂಬಾತನು ಗಲಾಟೆ ಮಾಡಿಕೊಂಡು ಏಕಾಎಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.
  ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿ ನಮೀರ್ ಹಂಸನು ಕೃತ್ಯ ನಡೆಸಿದ ನಂತರ ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಹಂಸನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
  ಆರೋಪಿ ನಮೀರ್ ಹಂಸ ಎಂಬಾತನು ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಇಲ್ಯಾಸ್ ಕೊಲೆ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ 3 ಕೊಲೆ ಯತ್ನ ಪ್ರಕರಣಗಳು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಅಪಹರಣ, ಕೊಲೆ ಯತ್ನ ಪ್ರಕರಣ ಹೀಗೆ ಒಟ್ಟು 10 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.
  ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ರಾಜೇಂದ್ರ ಬಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

  Share Information
  Advertisement
  Click to comment

  You must be logged in to post a comment Login

  Leave a Reply