ಮಂಗಳೂರು, ಜೂನ್ 11: ಮಂಗಳೂರು ಬಾರ್ ಅಸೋಸಿಯೇಷನ್ ಚುನಾವಣೆಯಲ್ಲಿ ಜಯ ಸಾಧಿಸಿ, ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ವಕೀಲರಾದ ಶ್ರೀ ಜಗದೀಶ್ ಶೇಣವ ಅವರನ್ನು ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಸನ್ಮಾನಿಸಲಾಯಿತು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯ ಸಂದರ್ಭದಲ್ಲಿ ಈ ಗೌರವ ಸಮರ್ಪಣೆ ನಡೆಯಿತು.
ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಬಿಜೆಪಿ ರಾಜ್ಯ ಕಾರ್ಯದರ್ಶಿ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಶಾಸಕರಾದ ಪ್ರತಾಪಸಿಂಹ ನಾಯಕ್, ವೇದವ್ಯಾಸ್ ಕಾಮತ್, ಭಾಗೀರಥಿ ಮುರುಳ್ಯ, ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ ಹಾಗೂ ಬಿಜೆಪಿಯ ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು.