Connect with us

    DAKSHINA KANNADA

    ಮಂಗಳೂರು : ಬರ್ಕೆ ಪೊಲೀಸರ ಕಾರ್ಯಾಚರಣೆ – 2.70 ಲಕ್ಷ ಮೌಲ್ಯದ ಇ ಸಿಗರೇಟ್ ವಶಕ್ಕೆ..!

    ಮಂಗಳೂರು ನಗರದಲ್ಲಿ ಕಾನೂನು ಬಾಹಿರವಾಗಿ ನಿಷೇಧಿತ ಇ ಸಿಗರೇಟ್‌ ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು 2.70 ಲಕ್ಷ ಮೌಲ್ಯದ ಸಿಗರೇಟುಗಳನ್ನು ವಶಕ್ಕೆ ಪಡೆದಿದ್ದಾರೆ.

    ಮಂಗಳೂರು : ಮಂಗಳೂರು ನಗರದಲ್ಲಿ ಕಾನೂನು ಬಾಹಿರವಾಗಿ ನಿಷೇಧಿತ ಇ ಸಿಗರೇಟ್‌ ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು 2.70 ಲಕ್ಷ ಮೌಲ್ಯದ ಸಿಗರೇಟುಗಳನ್ನು ವಶಕ್ಕೆ ಪಡೆದಿದ್ದಾರೆ.

    ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಲಾಲ್‌ಬಾಗ್ ಬಳಿಯ ಸಾಯಿಬಿನ್ ಕಾಂಪ್ಲೆಕ್ಸ್‌ ನ ನೆಲಮಹಡಿಯಲ್ಲಿರುವ “ಆಮಂತ್ರಣ”, “ಯೂನಿಕ್ ವರ್ಲ್ಡ್” ಮತ್ತು “ಫೆಂಟಾಸ್ಟಿಕ್ ವರ್ಲ್ಡ್” ಎಂಬ ಅಂಗಡಿಗಳಲ್ಲಿ ಕೇಂದ್ರ ಸರಕಾರದಿಂದ ನಿಷೇಧವಾಗಿರುವ ಇ-ಸಿಗರೇಟ್‌ಗಳನ್ನು ಮತ್ತು ಸರಕಾರದ ಎಚ್ಚರಿಕೆಯನ್ನು ಪ್ಯಾಕೆಟ್ ಮೇಲೆ ನಮೂದಿಸದ ವಿದೇಶಿ ಸಿಗರೇಟ್‌ಗಳನ್ನು ಕಾನೂನು ಬಾಹಿರವಾಗಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಬರ್ಕೆ ಠಾಣೆಯ ಪೊಲೀಸರು ದಾಳಿ ನಡೆಸಿ ಇ-ಸಿಗರೇಟ್ ಮತ್ತು ವಿದೇಶಿ ಸಿಗರೇಟ್ ಗಳನ್ನು ಗಳನ್ನು ಆರೋಪಿಗಳ ಸಮೇತ ಸ್ವಾಧೀನ ಪಡಿಸಿಕೊಂಡಿದ್ದಾರೆ.

     

    ವಶಪಡಿಸಿಕೊಂಡ ಸಿಗರೇಟುಗಳ ಬೆಲೆ ಅಂದಾಜು 2,70,000 ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ Prohibition of Electronic Cigarettes Act-2019 ಹಾಗೂ ಕೊಟ್ಪಾ ಕಾಯಿದೆ- 2003 ಹಾಗೂ Cigarettes and Other Tobacco Products (Packing and Labelling Rules 2020) ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಬಂಧಿತ ಆರೋಪಿಗಳು ಈ ಹಿಂದೆಯೂ ಕೂಡಾ ಇದೇ ದಂಧೆಯನ್ನು ನಡೆಸಿದ್ದು ಬರ್ಕೆ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

    ಆರೋಪಿಗಳು ಪದೇ ಪದೇ ಇಂತಹ ಅಕ್ರಮ ಚಟುವಟಿಕೆಗಳಿಗೆ ಭಾಗಿಯಾಗುತ್ತಿರುವುದರಿಂದ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸದರಿ ಅಂಗಡಿಗಳ ಟ್ರೇಡ್ ಲೈಸನ್ಸ್ ರದ್ದು ಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಮಹಾನಗರ ಪಾಲಿಕೆಗೆ ಪತ್ರ ಬರೆಯಲಾಗುವುದು ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply