LATEST NEWS
ಮೀನುಗಾರಿಕಾ ದೋಣಿ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ 6 ಲಕ್ಷ ರೂಪಾಯಿ ಪರಿಹಾರ
ಮಂಗಳೂರು ಡಿಸೆಂಬರ್ 2: ಆಳಸಮುದ್ರದಲ್ಲಿ ದುರಂತಕ್ಕೀಡಾದ ಮೀನುಗಾರಿಕಾ ದೋಣಿಯಲ್ಲಿ ಮೃತರಾದ 6 ಮಂದಿ ಮೀನುಗಾರರ ಕುಟುಂಬಗಳಿಗೆ 6 ಲಕ್ಷ ಪರಿಹಾರ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿಯವರು, ”ಮಂಗಳೂರಿನ ಪಡುಕಡಲಿನಲ್ಲಿ ಮೀನುಗಾರಿಕೆ ದೋಣಿ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿರ್ದೇಶನದ ಮೇರೆಗೆ ತಲಾ 6 ಲಕ್ಷ ರೂ. ಬಿಡುಗಡೆಗೊಳಿಸಲಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದ ಪರವಾಗಿ ಸಾಂತ್ವಾನ ಹೇಳುತ್ತಾ ನೊಂದ ಕುಟುಂಬಗಳ ಪರವಾಗಿ, ಮತ್ತಷ್ಟು ನೆರವಿಗಾಗಿ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ” ಎಂದು ತಿಳಿಸಿದ್ದಾರೆ.
ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೃಹತ್ ಬೋಟೊಂದು ಸಮುದ್ರದಲ್ಲಿ 15 ನಾಟಿಕಲ್ ಮೈಲು ದೂರದಲ್ಲಿ ಮುಳುಗಡೆಗೊಂಡು ಮೀನುಗಾರಿಕಾ ಬೋಟ್ ನಲ್ಲಿ 6 ಮಂದಿ ಮೀನುಗಾರರು ಸಾವನಪ್ಪಿದ್ದರು.
Facebook Comments
You may like
-
ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಕೊಳೆತ ಭ್ರೂಣದ ಅವಶೇಷ ಪತ್ತೆ..!!
-
ಬಿಯರ್ ತುಂಬಿದ್ದ ಲಾರಿ ಪಲ್ಟಿ…ಬಿಯರ್ ಬಾಟಲ್ ಗಳಿಗೆ ಮುಗಿಬಿದ್ದ ಮದ್ಯಪ್ರಿಯರು
-
ಗೂಗಲ್ ಮ್ಯಾಪ್ ನಂಬಿ ಗಲ್ಲಿಗೆ ನುಗ್ಗಿದ ಬಸ್ – 11 ಕೆವಿ ವಿದ್ಯುತ್ ತಂತಿ ತಗುಲಿ 11 ಮಂದಿ ಸಜೀವ ದಹನ
-
ಮಧ್ಯರಾತ್ರಿಯೂ ಕೆಲಸ ಮಾಡುವ ಮಂಗಳೂರಿನ ಸಬ್ ರಿಜಿಸ್ಟರ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವರ ದಿಢೀರ್ ಭೇಟಿ
-
ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ: ಆತ್ಮಹತ್ಯೆ ಶಂಕೆ
-
ಧಾರವಾಡ ಭೀಕರ ರಸ್ತೆ ಅಪಘಾತಕ್ಕೆ 11 ಮಂದಿ ಸಾವು
You must be logged in to post a comment Login