Connect with us

    BANTWAL

    ಮಂಗಳೂರು : ರಾಜಕರಣ ಮೂಲಕ ದೇಶ ಸೇವೆಗೆ ಹೊರಟ ಮಾಜಿ ಸೇನಾಧಿಕಾರಿ ಕ್ಯಾಪ್ಟನ್ ಬ್ರಿಜೇಶ್ ಚೌಟ..!

    ಮಂಗಳೂರು : 2024 ರ ಲೋಕಸಭಾ ಚುನಾವಣೆಗೆ ರಾಜಕೀಯ ಅಖಾಡ ಸಿದ್ದಗೊಳ್ಳುತ್ತಿದ್ದು ಬಿಜೆಪಿ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಅನೇಕ ಹಾಲಿ ಸಂಸದರಿಗೆ ಈ ಬಾರಿ ಕೊಕ್ ನೀಡಲಾಗಿದ್ದು ಹ್ಯಾಟ್ರಿಕ್ ಹೀರೋ ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬದಲಿಗೆ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಗಿಟ್ಟಿಸಿಕೊಂಡು ತಕ್ಷಣದಿಂದಲೇ ಅಖಾಡಕ್ಕಿಳಿದಿದ್ದಾರೆ. ರಾಜಕರಣ ಮೂಲಕ ದೇಶ ಸೇವೆಗೆ ಹೊರಟ ಮಾಜಿ ಸೇನಾಧಿಕಾರಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಯಾರು..?

    ಯಾರು ಈ ಕ್ಯಾಪ್ಟನ್ ಬ್ರಿಜೇಶ್ ಚೌಟ ? ಅವರ ಹಿನ್ನೆಲೆ ಏನು…!?
    ಮಾಜಿ ಸೈನಿಕ, ವಾಣಿಜ್ಯೋದ್ಯಮಿ, ಶಿಕ್ಷಣ ತಜ್ಞ ಬ್ರಿಜೇಶ್ ಚೌಟ ಸರಳ ಮಾನವತಾವಾದಿ ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿರುವ 42 ವರ್ಷದ ಬ್ರಿಜೇಶ್ ಚೌಟ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ 8 ವರ್ಷ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ಬಳಿಕ ಅವಿವಾಹಿತನಾಗಿದ್ದುಕೊಂಡು ಸಮಾಜ ಸೇವೆಗೆಳಿದು ತನ್ನನು ತಾನೇ ದೇಶಸೇವೆಗೆ ಮೂಡಿಪಾಗಿಟ್ಟ ಬ್ರಹ್ಮಚಾರಿ ಕೂಡ ಹೌದು.
    ಮಂಗಳೂರು ನಗರ ನಿವಾಸಿಯಾಗಿರುವ ಬ್ರಿಜೇಶ್ ತುಳುನಾಡಿನ ಪ್ರತಿಷ್ಠಿತ ಬಂಟ ಸಮೂದಾಯದ ಗುತ್ತಿನ ಮನೆತನದಲ್ಲಿ ಗತ್ತಿನಿಂದ ಜನಿಸಿದವರು. ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.

     


    ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದ ಚೌಟರು ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್ ನ ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡು 2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು.‌ 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜೊತೆಗೂಡಿ ಪಕ್ಷದ ಕೆಲಸ ಮಾಡಿದ್ದರು.
    2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿದ್ದರು. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿರುವ ಬೃಜೇಶ್ ಚೌಟ ಬಂಟ ಸಮುದಾಯದ ಪ್ರಮುಖ ಗುತ್ತಿನ ಮನೆಗೆ ಸೇರಿದ್ದು, ಮದುವೆಯಾಗದೇ ತಮ್ಮ ಸಂಪೂರ್ಣ ಜೀವನವನ್ನು ದೇಶ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ.


    ಪಕ್ಷದ ಚಟುವಟಿಕೆ ಜೊತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸದ್ದಿಲ್ಲದೆ ಸೇವಾ ಚಟುವಟಿಕೆಯನ್ನು ನಡೆಸಿದ್ದರು. ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು. ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜೊತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ, 2019ರಿಂದ ಪ್ರತಿ ವರ್ಷ ಲಿಟ್ ಫೆಸ್ಟ್ ಸಂಘಟಿಸುತ್ತಿದ್ದಾರೆ, ಆ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜೊತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.
    ಬ್ರಿಜೇಶ್‌ ಚೌಟ ಅವರು ಮೂಡುಬಿದಿರೆಯ ಬಂಟ ಕುಟುಂಬಕ್ಕೆ ಸೇರಿದವರು. ಹಾಗಂತ ಇವರೇನೂ ಶ್ರೀಮಂತ ಕುಟುಂಬದವರಲ್ಲ. ಬ್ರಿಜೇಶ್‌ ಚೌಟ ಅವರು ಸೈನ್ಯಕ್ಕೆ ಸೇರಿದ ನಂತರ ಕುಟುಂಬ ಫರಂಗಿಪೇಟೆಯಲ್ಲಿ ನೆಲೆಸಿದ್ದಾರೆ.
    2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿಗ ಚರ್ಚೆ ನಡೆಯುತ್ತಿರುವಾಗಲೇ ಬ್ರಿಜೇಶ್‌ ಚೌಟ ಹೆಸರು ಮುನ್ನೆಲೆಗೆ ಬಂದಿತ್ತು.
    ಬ್ರಿಜೇಶ್‌ ಚೌಟ ಅವರು ಕಾಲೇಜು ಜೀವನದಿಂದಲೇ ರಾಷ್ಟ್ರೀಯವಾದಿ, ಆರೆಸ್ಸೆಸ್‌ ಸ್ವಯಂಸೇವಕ. ಹೀಗಾಗಿ ಬಿಜೆಪಿಯ ಕಡೆಗೆ ಸಹಜ ಒಲವು ಹೊಂದಿದ್ದರು. ಅವರು ಬಿಜೆಪಿಯಲ್ಲಿ ಸಕ್ರಿಯವಾಗಿದ್ದು 2013ರ ವಿಧಾನಸಭಾ ಚುನಾವಣೆಯ ಬಳಿಕ. ಅವರು ಮೂರು ವರ್ಷಗಳ ಕಾಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು. ನಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರ ಹೆಸರು ಅಭ್ಯರ್ಥಿಯಾಗಿ ಕೇಳಿಬಂದಿತ್ತು. ಇದೀಗ ಅವರಿಗೆ ಸಂಸತ್‌ ಪ್ರವೇಶಕ್ಕೆ ಟಿಕೆಟ್‌ ಸಿಕ್ಕಿದೆ.

    Share Information
    Advertisement
    Click to comment

    You must be logged in to post a comment Login

    Leave a Reply