ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ಕೇರಳ ವಿಧ್ಯಾರ್ಥಿಗಳ ಗ್ಯಾಂಗ್ ಆರೆಸ್ಟ್

ಮಂಗಳೂರು ಜನವರಿ 13: ಕೇರಳದಿಂದ ಗಾಂಜಾ ಖರೀದಿ ಮಾಡಿ ಮಂಗಳೂರಿನಲ್ಲಿ ವಿಧ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿದ್ದ ಕೇರಳ ಮೂಲದ ವಿಧ್ಯಾರ್ಥಿಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಎಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಮೋರ್ಗನ್ ಗೇಟ್ ಬಳಿಯ ಮೈದಾನದಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಹಾಗೂ ಸೇವನೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಎಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯಲ್ಲಿ ಕೇರಳ ಮೂಲದ 8 ಮಂದಿ ವಿಧ್ಯಾರ್ಥಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕೇರಳದ ಕೊಲ್ಲಂ ಜಿಲ್ಲೆಯ ಕರಿಪ್ರ ಗ್ರಾಮ ಹಾಗೂ ಪ್ರಸ್ತುತ ನಗರದ ಕದ್ರಿ ನಿವಾಸಿ ಅಕ್ಷಯ್ ಕೆ. ಪ್ರಸಾದ್ , ಕೇರಳದ ಕಣ್ಣೂರು ಮೂಲದ ನಿವಾಸಿ ಗಳಾದ ನಿಮಿಲ್ , ಅಮಿತ್ ಶ್ರೀವತ್ಸನ್ , ಅಶ್ವಿನ್ , ಆಕಾಶ್ ಎಸ್. ನಾಯರ್ , ಅಕ್ಷಯ್ , ಮುಹಮ್ಮದ್ ಅಮೀರ್ ಹಾಗೂ ಮಂಗಳೂರು ನಗರದ ಹೊರವಲಯ ಕಣ್ಣೂರು ಬೋರುಗುಡ್ಡೆ ನಿವಾಸಿ ಜಾಫರ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 12 ಸಾವಿರ ರೂ. ಮೌಲ್ಯದ 500 ಗ್ರಾಂ ಗಾಂಜಾ, 8 ಮೊಬೈಲ್ ಫೋನ್‌ಗಳು, 4,050 ರೂ. ನಗದು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,69,050 ರೂ. ಎಂದು ಅಂದಾಜಿಸಲಾಗಿದೆ.

Facebook Comments

comments