Connect with us

DAKSHINA KANNADA

ಮಂಗಳೂರು ಸಿಸಿಬಿ ಪೋಲೀಸ್ ಕಾರ್ಯಾಚರಣೆ,MDMA ಸಾಗಿಸುತ್ತಿದ್ದ ಮೂವರ ಬಂಧನ…!!

ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

 


ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಹೊಸ ಮಾರುತಿ ಬಲೆನೋ ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಸುರತ್ಕಲ್ ಎನ್ಐಟಿಕೆ ಮುಕ್ಕ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ ಶಾಜಹಾನ್. ಪಿ.ಎಂ(32) ಕೀಯೂರ್ ಹೌಸ್, ಚಂದ್ರಗಿರಿ ಪೋಸ್ಟ್, ಕಳನಾಡು, ಕಾಸರಗೋಡು ಜಿಲ್ಲೆ, ಕೇರಳ ಮೊಹಮ್ಮದ್ ನಿಶಾದ್(27), ದೇವರಡ್ಕ ಹೌಸ್, ಅಡೂರು, ದೇಲಂಪಾಡಿ ಪೋಸ್ಟ್, ಕಾಸರಗೋಡು ಜಿಲ್ಲೆ, ಕೇರಳ ಪ್ರಸ್ತುತ ರೂಮ್ ನಂಬ್ರ 305, ಸಾರಾ ಟವರ್, ಈಜಿಪುರ, ಕೋರಮಂಗಲ, 5ನೇ ಬ್ಲಾಕ್, ಬೆಂಗಳೂರು, ಮನ್ಸೂರು ಎಂ.ಎಂ(27), ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬೆ ಪಾಲ್ಸ್ ಗೆ ಹೋಗುವ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ, ಪ್ರಸ್ತುತ ಎಸ್.ಎಲ್.ವಿ ಬಾಯ್ಸ್ ಪಿಜಿ, 28 ನೇ ಮುಖ್ಯರಸ್ತೆ, 7 ನೇ ಅಡ್ಡರಸ್ತೆ, ಮಾರುತಿ ನಗರ, ಬಿಟಿಎಂ 1ಸ್ಟೇಜ್, ಮಡಿವಾಳ, ಬೆಂಗಳೂರು ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ 2,10,000/- ರೂ ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್ ಗಳು, ಹೊಸ ಮಾರುತಿ ಬಲೆನೋ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 12,18,500/- ಆಗಬಹುದು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಹೊಸ ಕಾರನ್ನು ಬಾಡಿಗೆಗೆ ಪಡೆದುಬೆಂಗಳೂರಿನಿಂದ ಎಂಡಿಎಂಎನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.


ಆರೋಪಿಗಳ ಪೈಕಿ ಶಾಜಹಾನ್ ಎಂಬಾತನ ವಿರುದ್ಧ ಈ ಹಿಂದೆ ಕಾಸರಗೋಡು ಜಿಲ್ಲೆ ಮೇಲ್ಪರಂಬ, ಬೇಕಲಂ, ವಿದ್ಯಾನಗರ, ಕುಂಬಳೆ, ಕಾಸರಗೋಡು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ/ಸೇವನೆಗೆ ಸಂಬಂಧಪಟ್ಟಂತೆ ಒಟ್ಟು 7 ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಮೊಹಮ್ಮದ್ ನಿಶಾದ್ ಎಂಬಾತನ ವಿರುದ್ಧ ಪುತ್ತೂರು ನಗರ ಹಾಗೂ ಮಡಿಕೇರಿ ಪೊಲೀಸ್ ಠಾಣೆಯಲ್ಲಿ 2 ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *