LATEST NEWS
ಮಂಗಳೂರು: ಕಣ್ಣೂರು ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ- 25 ಲಕ್ಷದ ಮರಳುಸೊತ್ತು ವಶಕ್ಕೆ..!
ಮಂಗಳೂರು ನಗರದ ಕಣ್ಣೂರು ಬಳಿ ನೇತ್ರಾವತಿ ನದಿ ಕಿನಾರೆಯಿಂದ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಸೋಮವಾರ ಮಧ್ಯರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಮಂಗಳೂರು: ಮಂಗಳೂರು ನಗರದ ಕಣ್ಣೂರು ಬಳಿ ನೇತ್ರಾವತಿ ನದಿ ಕಿನಾರೆಯಿಂದ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಸೋಮವಾರ ಮಧ್ಯರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಸಿಸಿಬಿ ದಾಳಿ ವೇಳೆ ಸ್ಥಳದಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ.
ಮರಳು ಸಾಗಾಟಕ್ಕೆ ಬಳಸಿದ್ದ 5 ಟಿಪ್ಪರ್ ಲಾರಿಗಳು, ದೋಣಿ, ಮರಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 25.45 ಲ.ರೂ. ಮೌಲ್ಯ ಆಗಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.
ಸಿಸಿಬಿ ಘಟಕದ ಎಎಸ್ಸೈ ಮೋಹನ್ ಮತ್ತು ಸಿಬ್ಬಂದಿ ವರ್ಗವು ದಾಳಿಯಲ್ಲಿ ಪಾಲ್ಗೊಂಡಿತ್ತು.
You must be logged in to post a comment Login