DAKSHINA KANNADA
ಮಂಗಳೂರು ಸಿಸಿಬಿ ಕಾರ್ಯಾಚರಣೆ, ಕೋಟ್ಯಾಂತ ರೂ. ಬೆಲೆಯ ತಿಮಿಂಗಿಲದ ವಾಂತಿಯೊಂದಿಗೆ ಮೂವರು ವಶಕ್ಕೆ..!

ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಕೊಟ್ಯಾಂತ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್ ಅಥವಾ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಒಟ್ಟು 1,62,80,000/- ರೂ ಮೌಲ್ಯದ ಸೊತ್ತನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಮಂಗಳೂರು ನಗರದ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಪ್ಟ್ ಕಾರಿನಲ್ಲಿ ತಿಮಿಂಗಿಲದ ವಾಂತಿ ಎಂಬ ಬೆಲೆಬಾಳುವ ವನ್ಯ ಜೀವಿ ಉತ್ಪನ್ನವನ್ನು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ದಸ್ತಗಿರಿ ಮಾಡಿದ ಮೂರು ಆರೋಪಿತರಿಂದ ರೂ ಮೌಲ್ಯದ 1. 575 ಕೆಜಿ ತಿಮಿಂಗಿಲದ ವಾಂತಿ, ಕಾರು ಹಾಗೂ ಮೊಬೈಲ್ ಫೋನ್ ಗಳು ಸೇರಿದಂತೆ ಒಟ್ಟು 1,62,80,000 ಸೊತ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ. ಮೂಲತ ಚಿಕ್ಕಮಗಳೂರಿನ ಪ್ರಸ್ತುತ ವಿಟ್ಲ ಮಂಗಿಲಪದವು ನಿವಾಸಿ ಪ್ಯಾರೇಜಾನ್ @ಸೇಟು, ಬದ್ರುದ್ದೀನ್ @ ಬದ್ರು, ತಮಿಳುನಾಡಿನ ನಾಗಪಟ್ಟಣಂ ನ ರಾಜೇಶ್ ಬಂಧಿತ ಆರೋಪಿಗಳಾಗಿದ್ದಾರೆ.
