DAKSHINA KANNADA
ಮಂಗಳೂರು ಚಲೋ ಮತ್ತೆ ಕೋಮು ಗಲಭೆ ಸೃಷ್ಠಿಸುವ ಅಜೆಂಡಾ : ಮಿಥುನ್ ರೈ
ಮಂಗಳೂರು, ಸೆಪ್ಟೆಂಬರ್ 04 : ಬೈಕ್ ಜಾಥಾ ಮೂಲಕ ಮಂಗಳೂರು ಚಲೋ ಪ್ರತಿಭಟನಾ ಕಾರ್ಯಕ್ರಮದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋಮು ಗಲಭೆ ಸೃಷ್ಠಿಸುವ ಅಜೆಂಡಾವನ್ನು ಬಿಜೆಪಿ ಹೊಂದಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಆರೋಪಿಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಪಿ ಎಫ್ ಐ ಮತ್ತು ಸಂಘ ಪರಿವಾರದ ಸಂಘಟನೆಗಳು ಮತೀಯ ಸಂಘಟನೆ ಗಳಾಗಿದ್ದು ಅವುಗಳನ್ನು ಈ ಕೂಡಲೇ ನಿಷೇಧಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಜಿಲ್ಲೆಯಲ್ಲಿ ನಡೆದಿರುವ ಹಲವಾರು ಹತ್ಯೆ ಪ್ರಕರಣ ದಲ್ಲಿ ಸಂಘ ಪರಿವಾರದ ಸಂಘಟನೆಗಳ ಕಾರ್ಯಕರ್ತರು ನೇರವಾಗಿ ಭಾಗಿಯಾಗಿರುವ ಬಗ್ಗೆ ಈಗಾಗಲೇ ಬೆಳಕಿಗೆ ಬಂದಿದೆ. ಈ ನಡುವೆ ಶರತ್ ಮಡಿವಾಳ ಹತ್ಯೆ ಪ್ರಕರಣ ಮುಂದಿಟ್ಟು ಪ್ರತಿಭಟನಾ ಜಾಥಾ ನಡೆಸುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಕಿಡಿಕಾರಿದರು.
ಜಿಲ್ಲೆಯ ಸೌಹಾರ್ದತೆಗೆ ಧಕ್ಕೆ ತಂದು ಚುನಾವಣೆಯ ಮೊದಲು ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಠಿಸುವ ಹುನ್ನಾರ ಬಿಜೆಪಿ – ಸಂಘಪರಿಪವಾರ ನಡೆಸಿದೆ ಎಂದು ಅವರು ಆರೋಪಿಸಿದರು. ಈ ಹಿಂದೆ ನಡೆದಿರುವ ಕೋಮು ಗಲಭೆಗಳಿಂದ ಜಿಲ್ಲೆ ದೇಶದಲ್ಲೇ ಅಪಖ್ಯಾತಿಗೆ ಗುರಿಯಾಗಿದೆ. ಇದರ ಪರಿಣಾಮ ಜಿಲ್ಲೆಯ ಅಭಿವೃದ್ದಿ ಕುಂಟಿತಗೊಂಡಿದೆ. ಬಹುರಾಷ್ಟೀಯ ಕಂಪನಿಗಳು ಜಿಲ್ಲೆಗೆ ಬರಲು ಹಿಂದೇಟು ಹಾಕುತ್ತಿವೆ ಎಂದು ಹೇಳಿದ ಅವರು ಈ ನಡುವೆ ಜಿಲ್ಲೆಯಲ್ಲಿ ಮತ್ತೆ ಕೋಮು ಗಲಭೆ ನಡೆದರೆ ಜಿಲ್ಲೆಯ ಆರ್ಕಥಿತೆಗೆ ಭಾರಿ ಧಕ್ಕೆ ಉಂಟಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ವಿಡಿಯೋ..