LATEST NEWS
ಆಂಧ್ರಪ್ರದೇಶದಿಂದ ಮಂಗಳೂರಿಗೆ 123 ಕೆಜಿ ಗಾಂಜಾ – ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಗಾಂಜಾ ಖದೀಮರು

ಮಂಗಳೂರು ಅಗಸ್ಟ್ 1: ಆಂಧ್ರಪ್ರದೇಶದಿಂದ ಮಂಗಳೂರಿಗೆ 123 ಕೆಜಿ ಗಾಂಜಾ ತೆಗೆದುಕೊಂಡು ಬರುತ್ತಿದ್ದ ದೊಡ್ಡ ಗ್ಯಾಂಗ್ ನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಕೇರಳ ರಾಜ್ಯದ ನಿವಾಸಿಗಳಾದ ಮಸೂದ್ ಎಂಕೆ (45), ಮೊಹಮ್ಮದ್ ಆಶಿಕ್ (24), ಸುಬೇರ್ (30) ಎಂದು ಗುರುತಿಸಲಾಗಿದೆ.
ಸಿಸಿಬಿ ಪೊಲೀಸರು ದಿನಾಂಕ 31-07-2025 ರಂದು 2 ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು, ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಗಾಂಜಾ ಹೇರಿಕೊಂಡು ಮಂಗಳೂರು ಕಡೆಗೆ ಬರುತ್ತಿದ್ದ 2 ವಾಹನಗಳನ್ನು ಪತ್ತೆಹಚ್ಚಿದ್ದಾರೆ.

ಪೊಲೀಸರು ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು (KA-21-P-9084 ಹಾಗೂ KL-14-AF-7010) ಮತ್ತು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದು, ಈ ಎಲ್ಲಾ ಸೊತ್ತಿನ ಒಟ್ಟು ಮೌಲ್ಯ ಸುಮಾರು 46, 20,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು ನಗರ ಪೊಲೀಸರಿಂದ ನಿರಂತರವಾಗಿ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯು ಮುಂದುವರೆದಿರುತ್ತದೆ, ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.