LATEST NEWS
ಮಂಗಳೂರು ನಗರ ಪೊಲೀಸ್ – 16 ಮಂದಿ ಎಎಸೈ ಗಳಿಗೆ ಪಿಎಸ್ಐ ಭಡ್ತಿ..!

ಮಂಗಳೂರು ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಮಂದಿ ASI ಗಳಿಗೆ PSI ಆಗಿ ಭಡ್ತಿ ನೀಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು : ಮಂಗಳೂರು ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಮಂದಿ ASI ಗಳಿಗೆ PSI ಆಗಿ ಭಡ್ತಿ ನೀಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ರವರು ಸುದೀರ್ಘ ಮತ್ತು ಅತ್ಯುತ್ತಮ ಸೇವೆ ಸಲ್ಲಿಸಿದ ಕಿರಿಯ ಶ್ರೇಣಿಯ ಪೊಲೀಸ್ ಅಧಿಕಾರಿಗಳಿಗೆ ಭಡ್ತಿ ನೀಡುವ ವಿಚಾರದಲ್ಲಿ ತುಂಬಾ ಆಸಕ್ತಿಯನ್ನು ವಹಿಸಿ ಕಾರ್ಯ ಪ್ರವೃತ್ತರಾಗಿದ್ದರು.
ಆದ್ರೆ ತಾಂತ್ರಿಕ ಕಾರಣಗಳಿಂದಾಗಿ ಇದು ಸಾಧ್ಯವಾಗಿರಲಿಲ್ಲ. ಇಡೀ ರಾಜ್ಯಕ್ಕೆ ಅನ್ವಯಿಸುವಂತೆ ಸರಕಾರದಿಂದ ಆದೇಶ ಹೊರ ಬಿದ್ದಿರುವ ಹಿನ್ನೆಲೆಯಲ್ಲಿ 16 ಮಂದಿಗೆ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ನಿಂದ ಸಬ್ ಇನ್ಸ್‌ಪೆಕ್ಟರ್ ಆಗಿ ಭಡ್ತಿ ಹೊಂದಿದ್ದಾರೆ.
https://youtu.be/kCA_Wxfh9pI