Connect with us

    DAKSHINA KANNADA

    ಬಸ್ಸಿನಲ್ಲೇ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಸ್ ಕಂಡಕ್ಟರನ್ನು ಜೈಲಿಗಟ್ಟಿದ ಮಂಗಳೂರು ಕೋರ್ಟ್..!

    ಮಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರಿಗೆ ಮಂಗಳೂರಿನ ನ್ಯಾಯಾಲಯ ಜೈಲಿಗಟ್ಟಿ ಕಠಿಣ ಶಿಕ್ಷೆ ವಿಧಿಸಿದೆ.

    ಬಾಗಲಕೋಟೆಯ ದಾವಲ್ ಸಾಬ್ (34) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. 2023ರ ಮಾರ್ಚ್‌ನಲ್ಲಿ ಈ ಘಟನೆ ನಡೆದಿತ್ತು. ಬಾಲಕಿ ಶಾಲೆಯಿರುವ ಕಲ್ಲಡ್ಕದಿಂದ ಬಿ.ಸಿ.ರೋಡ್‌ನಲ್ಲಿರುವ ತನ್ನ ಮನೆಗೆ ಬರಲು ಕೆಎಸ್‌ಆರ್‌ಟಿಸಿ ಬಸ್ ಹತ್ತಿದ್ದಳು. ಆಗ ಬಸ್‌ನಲ್ಲಿ 4-5 ಮಂದಿ ಪ್ರಯಾಣಿಕರು ಮಾತ್ರ ಇದ್ದು ಮುಂದಿನ ನಿಲ್ದಾಣದಲ್ಲಿ ಅವರು ಇಳಿದಿದ್ದರು. ಆಗ ಬಸ್ ಚಾಲಕ ಮತ್ತು ಆರೋಪಿ ನಿರ್ವಾಹಕ ಹಾಗೂ ಬಾಲಕಿ ಮಾತ್ರ ಇದ್ದರು. ಆಕೆಯ ಬಳಿಗೆ ಬಂದ ನಿರ್ವಾಹಕ ಆತನ ಪ್ಯಾಂಟ್‌ನ ಜಿಪ್ ತೆಗೆದು ಗುಪ್ತಾಂಗವನ್ನು ತೋರಿಸಿ ಕಿರುಕುಳ ನೀಡಿದ್ದಾನೆ. ಅಲ್ಲದೆ ಮುಖ ಸನ್ನೆಯಲ್ಲಿ ಬಾ ಎಂದು ಪೀಡಿಸಿದ್ದಾನೆ. ಬಾಲಕಿ ತಾನು ಹೆತ್ತವರು, ಪೊಲೀಸರಿಗೆ ತಿಳಿಸುವುದಾಗಿ ಹೇಳಿದರೂ ಆರೋಪಿ ಕಿರುಕುಳ ನೀಡಿದ್ದ. ಅಸಭ್ಯವಾಗಿ ವರ್ತಿಸಿ ಮಾನಕ್ಕೆ ಕುಂದುಂಟಾಗುವಂತೆ ವರ್ತಿಸಿದ್ದ. ಅನಂತರ ಮತ್ತೊಂದು ಸ್ಟಾಪ್‌ನಲ್ಲಿ ಕೆಲವು ಪ್ರಯಾಣಿಕರು ಹತ್ತಿದರು. ಆಗ ಆರೋಪಿ ವಿದ್ಯಾರ್ಥಿನಿಯ ಬಳಿಯಿಂದ ತೆರಳಿ ಜಿಪ್ ಹಾಕಿ ಆ ಪ್ರಯಾಣಿಕರಿಗೆ ಟಿಕೆಟ್ ನೀಡಿದ್ದ. ತೀವ್ರವಾಗಿ ನೊಂದಿದ್ದ ಬಾಲಕಿ ಬಸ್‌ನ ಸಂಖ್ಯೆಯೊಂದಿಗೆ ಮನೆಗೆ ಬಂದು ತಾಯಿಗೆ ಬಸ್‌ನಲ್ಲಿ ನಡೆದ ಎಲ್ಲ ಘಟನೆ ತಿಳಿಸಿದ್ದಳು. ಅನಂತರ ತಾಯಿ ಮತ್ತು ಬಾಲಕಿ ಬಂಟ್ವಾಳ ನಗರ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿ ಬಿ.ಸಿ.ರೋಡ್‌ನಿಂದ ಮಂಗಳೂರಿಗೆ ಬಂದಿದ್ದ ಅದೇ ಬಸ್ ವಾಪಸ್ ಹೋಗುವಾಗ ನಿರ್ವಾಹಕನನ್ನು ವಶಕ್ಕೆ ಪಡೆದಿದ್ದರು. ಇನ್ಸ್‌ಪೆಕ್ಟರ್ ನಂದಿನಿ ಎಸ್.ಶೆಟ್ಟಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶ ಮಂಜುಳಾ ಇಟ್ಟಿ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪೊಕ್ಸೋ ಕಾಯಿದೆಯ ಕಲಂ 12ರಡಿ 2 ವರ್ಷ ಕಠಿನ ಸಜೆ ಮತ್ತು 10,000 ರೂ. ದಂಡ, ಒಂದು ವೇಳೆ ದಂಡ ಪಾವತಿಸದಿದ್ದರೆ ಮತ್ತೆ 2 ತಿಂಗಳು ಸಾದಾ ಸಜೆ ವಿಧಿಸಿದ್ದಾರೆ. ಆರೋಪಿಗೆ ಐಪಿಸಿ ಕಲಂ 509ರಡಿ ಒಂದು ವರ್ಷ ಸಾದಾ ಸಜೆ ಮತ್ತು 5,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ ಒಂದು ತಿಂಗಳು ಸಾದಾ ಸಜೆ, ಅಲ್ಲದೆ ಸಂತ್ರಸ್ತೆ ವಿದ್ಯಾರ್ಥಿನಿಗೆ 10,000 ರೂ.ಗಳನ್ನು ಪರಿಹಾರವಾಗಿ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪೋಕ್ಸೊ ವಿಶೇಷ ಸರ್ಕಾರಿ ಅಭಿಯೋಜಕಿ ಸಹಾನದೇವಿ ಬೋಳೂರು ವಾದಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply