LATEST NEWS
ಮಂಗಳೂರು : ಪೋಕ್ಸೋ ಆರೋಪಿಯನ್ನು ಬಿಡುಗಡೆ ಮಾಡಿದ ಕೋರ್ಟ್..!
ಮಂಗಳೂರು : 2023 ಜೂನ್ 13 ರಂದು ಮಂಗಳೂರು ಹೊರವಲಯದ ಬಜಪೆಯಲ್ಲಿ ನಡೆದಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಮಾನ್ಯ ಮಂಗಳೂರು ನ್ಯಾಯಾಲಯ ಬಿಡುಗಡೆಗೊಳಿಸಿ ಆದೇಶಿಸಿದೆ.
ಆರೋಪಿ ಕಿರಣ್ ಎಂಬಾತನು ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿ ಯನ್ನು “ ಪ್ರೀತಿ ಮಾಡುತ್ತಿದ್ದು, ಮದುವೆಯಾಗುತ್ತೇನೆ” ಎಂದು ನಂಬಿಸಿ ನೊಂದ ಬಾಲಕಿಯನ್ನು ಬಜಪೆ ಬಸ್ಸು ನಿಲ್ದಾಣದ ಬಳಿ ಕರೆಸಿ ಬಾಲಕಿಯನ್ನು ಪುಸಲಾಯಿಸಿ ಮಂಗಳೂರು ತಾಲೂಕು ಮೂಡುಪೆರಾರ ಗ್ರಾಮದ ಅರ್ಕೆಪದವು ಎಂಬಲ್ಲಿರುವ ಮನೆಗೆ ಕರೆದುಕೊಂಡು ಹೋಗಿ ನೊಂದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ 3 ದಿನ ಅವಳ ಜೊತೆ ಬಲವಂತವಾಗಿ ಲೈಂಗಿಕ ಸಂಭೋಗ ನಡೆಸಿದ್ದಾನೆ ಎಂದು ಬಜಪೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಮಂಗಳೂರು ನ್ಯಾಯಾಲಯದಲ್ಲಿ ಆರೋಪಿಯ ವಿರುದ್ದ ತನಿಖೆ ನಡೆಸಿ ಸಾಕ್ಷಿದಾರರನ್ನು ತನಿಖೆ ಮಾಡಿ ವಾದ ವಿವಾದ ಗಳನ್ನು ಆಲಿಸಿದ ದ.ಕ ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಧೀಶರಾದ ಮನು.ಕೆ ರವರು ಆರೋಪಿಯ ವಿರುದ್ದ ಕೇಸನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಆರೋಪಿಯನ್ನು ಕೇಸಿನಿಂದ ಮುಕ್ತಗೊಳಿಸಿ ಬಿಡುಗಡೆ ಮಾಡಿರುತ್ತಾರೆ. ಆರೋಪಿಯ ಪರವಾಗಿ ಜಿ.ವಾಸುದೇವ ಗೌಡ ಮುಖ್ಯ ಕಾನೂನು ನೆರವು ಅಭಿರಕ್ಷಕರು ವಾದಿಸಿದ್ದರು.
You must be logged in to post a comment Login