Connect with us

LATEST NEWS

ಮಂಗಳೂರು ನಗರಕ್ಕೆ ಇನ್ನು 2 ದಿನಕ್ಕೊಮ್ಮೆ ನೀರು – ನೀರು ಬಳಕೆಯಲ್ಲಿ ಮೀತಿ ಇರಲಿ

ಮಂಗಳೂರು ನಗರಕ್ಕೆ ಇನ್ನು 2 ದಿನಕ್ಕೊಮ್ಮೆ ನೀರು – ನೀರು ಬಳಕೆಯಲ್ಲಿ ಮೀತಿ ಇರಲಿ

ಮಂಗಳೂರು ಏಪ್ರಿಲ್ 11 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ನೇತ್ರಾವತಿ ನದಿಯಿಂದ ಪೂರೈಕೆ ಮಾಡಲಾಗುತ್ತಿದ್ದು, ಪ್ರಸ್ತುತ ನದಿಯಲ್ಲಿ ಫೆಬ್ರವರಿ ತಿಂಗಳಿನಿಂದಲೇ ನೀರಿನ ಒಳ ಹರಿವು ಸಂಪೂರ್ಣ ಸ್ಥಗಿತಗೊಂಡಿದ್ದು, 2019ನೇ ಏಪ್ರಿಲ್ 10 ರಲ್ಲಿ ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ 5.80 ಮೀ. ಮಾತ್ರ ಲಭ್ಯವಿದ್ದು, ಮಳೆಗಾಲ ಪ್ರಾರಂಭವಾಗುವ ಜೂನ್ ಮೊದಲನೇ ವಾರದವರೆಗೆ ನೀರನ್ನು ಸಮರ್ಪಕವಾಗಿ ಬಳಸಿ ವಿತರಣೆ ಮಾಡಬೇಕಾಗಿರುತ್ತದೆ.

ಮುಂಜಾಗೃತ ಕ್ರಮವಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದೆಂದು ಮುಂದಿನ ದಿನಗಳಲ್ಲಿ 4 ದಿನಗಳ ಒಟ್ಟು 96 ಗಂಟೆಗಳ ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡ್‍ಗಳಿಗೆ ಹಾಲಿ ಪೂರೈಕೆ ಮಾಡುತ್ತಿರುವ ರೀತಿಯಲ್ಲಿ ನೀರನ್ನು ಸರಬರಾಜನ್ನು ಮಾಡಲಾಗುವುದು. ತದನಂತರ 48 ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಸ್ಥಗಿತಗೊಳಿಸಲಾಗುವುದು.

ಸದ್ರಿ ವ್ಯವಸ್ಥೆಯು ತಾತ್ಕಾಲಿಕವಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬಂದು ನದಿಯಲ್ಲಿ ಒಳಹರಿವು ಕಂಡು ಬಂದಲ್ಲಿ ಸದ್ರಿ ನೀರು ಸರಬರಾಜು ವ್ಯವಸ್ಥೆಯನ್ನು ಈ ಹಿಂದಿನಂತೆಯೇ ಪೂರೈಕೆ ಮಾಡಲಾಗುವುದು. ಹಾಗಾಗಿ ಸಾರ್ವಜನಿಕರು ತಮ್ಮ ಮನೆಗಳಲ್ಲಿನ ಕೈತೋಟಗಳಿಗೆ, ವಾಹನ ತೊಳೆಯಲು ಹಾಗೂ ಇನ್ನಿತರ ಕೆಲಸಗಳಿಗೆ ಕುಡಿಯುವ ನೀರನ್ನು ಬಳಸಬಾರದು ಹಾಗೂ ನೀರನ್ನು ಪೋಲು ಮಾಡದೆ ಮಿತವಾಗಿ ಬಳಸಬೇಕು.

ತಗ್ಗು ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಪೂರೈಕೆಯಾಗುತ್ತಿರುವ ಬಳಕೆದಾರರು ಕುಡಿಯುವ ನೀರನ್ನು ಮಿತವಾಗಿ ಬಳಸಿ ಅವಶ್ಯಕತೆ ಇದ್ದಷ್ಟನ್ನೇ ಉಪಯೋಗಿಸಿಕೊಂಡು ತಮ್ಮ ಮನೆಯ ಗೇಟ್ ವಾಲ್ವ್‍ಗಳನ್ನು ಬಂದ್ ಮಾಡಿ ಎತ್ತರದ ಪ್ರದೇಶದಲ್ಲಿನ ಸಾರ್ವಜಿನಿಕರಿಗೆ ನೀರು ಪೂರೈಕೆಯಾಗುವಂತೆ ಸಹಕರಿಸುವಂತೆ ಆಯುಕ್ತರು ಮಹಾನಗರ ಪಾಲಿಕೆ, ಮಂಗಳೂರು ಇವರ ಪ್ರಕಟನೆ ತಿಳಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *