DAKSHINA KANNADA
ಮಂಗಳೂರು : ಶ್ರೀ ಕೃಷ್ಣ ಜನ್ಮಾಷ್ಟಮಿಗೆ 88 ಬಗೆಯ ಖಾದ್ಯ ತಯಾರಿಸಿದ ಭಕ್ತೆ..!

ಭಕ್ತೆ ಯಶೋಧೆಯಾಗಿ ಮುದ್ದು ಕೃಷ್ಣನಿಗೆ ಪ್ರಿಯವಾದ 88 ಬಗೆಯ ಖಾದ್ಯಗಳನ್ನು ಮಾಡಿ ಬಡಿಸಿದ್ದು ಮಂಗಳೂರು ವೈದ್ಯರೊಬ್ಬರು ಮಾಡಿದ್ದ ಈ ಟ್ವೀಟ್ ವೈರಲ್ ಆಗಿದೆ.
ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಭಕ್ತೆಯೊಬ್ಬರು ಶ್ರೀ ಕೃಷ್ಣನಿಗೆ 88 ಬಗೆಯ ಖಾದ್ಯ ಬಡಿಸಿದ್ದು, ಇದರ ಪೊಟೋವನ್ನು ಮಂಗಳೂರಿನ ಖ್ಯಾತ ವೈದ್ಯರೊಬ್ಬರು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು ವೈರಲ್ ಆಗಿದೆ.

ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞ ಆಗಿರುವ ಡಾ. ಪದ್ಮನಾಭ್ ಕಾಮತ್ ಅವರು ಜನ್ಮಾಷ್ಟಮಿಯ ದಿನ ತಮ್ಮ ರೋಗಿಯೊಬ್ಬರು ತಯಾರಿಸಿದ 88 ಬಗೆಯ ಖಾದ್ಯಗಳ ಫೋಟೋವೊಂದನ್ನು ಸಾಮಾಜಿಕ ಜಾಲ ತಾಣದಲ್ಲಿ ಹಾಕಿದ್ದಾರೆ.
ವೈದ್ಯರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪೋಸ್ಟ್ನಲ್ಲಿ, ಅಲಂಕಾರಗೊಂಡ ದೇವರ ಮಂಟಪ, ಕೃಷ್ಣನ ಮುಂದೆ ಅಚ್ಚುಕಟ್ಟಾಗಿ ಇರಿಸಿದ 88 ಬಗೆಯ ತಿನಿಸುಗಳು, ಮಧ್ಯ ಭಕ್ತೆ ಕುಳಿತಿರುವ ಫೊಟೋಗಳನ್ನು ಹಂಚಿಕೊಂಡಿರುವ ಜೊತೆಗೆ “ಅವರ ಮತ್ತು ಅವರಿಗೆ ಶ್ರೀಕೃಷ್ಣನ ಮೇಲಿರುವ ಭಕ್ತಿಯ ಬಗ್ಗೆ ಹೆಮ್ಮೆಯಿದೆ.
ಅವರು ನನ್ನ ಬಳಿ ಚಿಕಿತ್ಸೆ ಪಡೆಯುತ್ತಿರುವವರು (ರೋಗಿ).
ಅವರು ಈ ಹಿಂದಿನ ಅವರ ದಾಖಲೆಯನ್ನು ಮತ್ತೊಮ್ಮೆ ಮುರಿದಿದ್ದಾರೆ. ಗೋಕುಲಾಷ್ಟಮಿ ಹಿನ್ನೆಲೆ ಅವರು 88 ಬಗೆ ಬಗೆಯ ಖಾದ್ಯಗಳನ್ನು ತಯಾರಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.
ಸದ್ಯ ಈ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Proud of her and her devotion to lord Krishna. She is my patient. She has again broken her previous record. 88 dishes were prepared last night for Gokulashtami. #janamashtami pic.twitter.com/SDoh3JKTvM
— Dr P Kamath (@cardio73) September 7, 2023