Connect with us

  DAKSHINA KANNADA

  ಮಂಗಳೂರು: ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ

  ಮಂಗಳೂರು, ಜುಲೈ 4: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

  ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.

  ಬೆಳ್ತಂಗಡಿ ತಾಲೂಕಿನ ನರಸಿಂಹಗಢ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್​ಎಫ್​​ಒಗೆ ಕುದುರೆಮುಖ ಸಿಎಫ್ ಆದೇಶ ಹೊರಡಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply