DAKSHINA KANNADA
ಮಂಗಳೂರು : ದುಷ್ಕರ್ಮಿಗಳ ದಾಳಿ ಹಿನ್ನೆಲೆ, ಐವನ್ ಡಿಸೋಜಾರ ನಿವಾಸ ಮತ್ತು ಕುಟುಂಬಕ್ಕೆ ಗರಿಷ್ಟ ಭದ್ರತೆ..!
ಮಂಗಳೂರು : ದುಷ್ಕರ್ಮಿಗಳ ದಾಳಿ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ(Ivan Dsouza) ಅವರ ಮನೆಯ ಸುರಕ್ಷತೆಯನ್ನು ಬಿಗಿಗೊಳಿಸಲಾಗಿದೆ.
ಬುಧವಾರ ತಡ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡ ನಗರದ ವಾಲೆನ್ಸಿಯಾದಲ್ಲಿರುವ ಐವನ್ ಡಿಸೋಜಾ ಅವರ ನಿವಾಸಕ್ಕೆ ಕಲ್ಲು ತೂರಾಟ ಮಾಡಿ ಪರಾರಿಯಾಗಿದ್ದಾರೆ. ಪ್ರಾರ್ಥಮಿಕ ವರದಿಗಳ ಪ್ರಕಾರ ಇಬ್ಬರು ಈ ದಾಳಿಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಘಟನೆ ನಡೆದ ತಕ್ಷಣ ಡಿಸಿಪಿ, ಎಸಿಪಿ ಮತ್ತು ಪಾಂಡೇಶ್ವರ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಜೊತೆಗೆ ಐವನ್ ಅವರ ನಿವಾಸದ ಸುತ್ತಮುತ್ತಲಿನ ಭದ್ರತೆಯನ್ನು ಹೆಚ್ಚಿಸಲಾಗಿದೆ ಜೊತೆಗೆ ಶಾಸಕ ಮತ್ತು ಅವರ ಕುಟುಂಬದ ಸುರಕ್ಷತೆಯನ್ನು ಕಾಪಾಡಲು 24×7 ಕಾರ್ ಪಾರ್ಟಿಯನ್ನು ನಿಯೋಜಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಘಟನೆಯ ಕುರಿತು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸಿಪಿ ಕೇಂದ್ರ ಮತ್ತು ಪಾಂಡೇಶ್ವರ ಪೊಲೀಸ್ ಠಾಣಾಧಿಕಾರಿ ನೇತೃತ್ವದಲ್ಲಿ ದುಷ್ಕರ್ಮಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ತಂಡವು ಸ್ಥಳೀಯ ಅಂಗಡಿಗಳು ಮತ್ತು ಸಂಸ್ಥೆಗಳಿಂದ ಸಿಸಿಟಿವಿ ದೃಶ್ಯಗಳು ಸೇರಿದಂತೆ ಎಲ್ಲಾ ಸಂಬಂಧಿತ ಪುರಾವೆಗಳನ್ನು ಸಂಗ್ರಹಿಸುವ ಕಾರ್ಯ ಆರಂಭಿಸಿದ್ದು ಈ ದುಷ್ಕೃತ್ಯದ ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
You must be logged in to post a comment Login