Connect with us

    KARNATAKA

    ಮೇಲಧಿಕಾರಿಗಳೊಂದಿಗೆ ಅನುಚಿತ ವರ್ತನೆ, ಕಂಕನಾಡಿ ನಗರ ಠಾಣೆ PI ಭಜಂತ್ರಿ ಸಸ್ಪೆಂಡ್..!

    ಮಂಗಳೂರು : ಮೇಲಧಿಕಾರಿಗಳ ಜೊತೆಗೆ ಅನುಚಿತವಾಗಿ ವರ್ತನೆ ಮತ್ತು ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ನಗರ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ..

    ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ವ್ಯಾಪಕ ಮರಳುಗಾರಿಕೆ ನಡೆಯುತ್ತಿದ್ದರಿಂದ ಎಸಿಪಿ ಧನ್ಯಾ ನಾಯಕ್ ಕಾರ್ಯಾಚರಣೆ ನಡೆಸಲು ಅಧಿಕಾರಿಗೆ ಸೂಚಿಸಿದ್ದರೂ, ಇನ್ಸ್ ಪೆಕ್ಟರ್ ಭಜಂತ್ರಿ ನಿರ್ಲಕ್ಷ್ಯ ವಹಿಸಿದ್ದರು ಜೊತೆಗೆ ತನ್ನ ಮೇಲಧಿಕಾರಿ ಎಸಿಪಿ ಜೊತೆಗೆ ಉಡಾಫೆಯಿಂದ ಮಾತನಾಡಿದ್ದರು ಎನ್ನಲಾಗಿದೆ.ಬಗ್ಗೆ ಎಸಿಪಿ ಧನ್ಯಾ ನಾಯಕ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ವರದಿ ನೀಡಿದ್ದರು. ಇದಲ್ಲದೆ ಭಜಂತ್ರಿ ಮೇಲೆ ಇತರ ಆರೋಪಗಳು ಮತ್ತು ಸಾರ್ವಜನಿಕ ದೂರುಗಳು ಬಂದ ಹಿನ್ನೆಲ್ಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಅವರು ಭಜಂತ್ರಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *