ಮಹಿಳೆಯೊಬ್ಬರು ತನ್ನ ಮೂವರು ಗಂಡು ಮಕ್ಕಳು ವಿಪರೀತ ಮದ್ಯ ಸೇವಿಸಿ ಮನೆಗೆ ಬಂದು ಜಗಳ ಮಾಡುತ್ತಿದ್ದ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.
ಮಂಗಳೂರು : ಮಹಿಳೆಯೊಬ್ಬರು ತನ್ನ ಮೂವರು ಗಂಡು ಮಕ್ಕಳು ವಿಪರೀತ ಮದ್ಯ ಸೇವಿಸಿ ಮನೆಗೆ ಬಂದು ಜಗಳ ಮಾಡುತ್ತಿದ್ದ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಮುಲ್ಕಿಯ ಕೆ ಎಸ್ ರಾವ್ ನಗರದ ಲಿಂಗಪ್ಪಯ್ಯ ಕಾಡು ಪ್ರದೇಶದ ಕೊರಂಟಬೆಟ್ಟು ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು ಸುಮಿತ್ರ (44) ಮೃತ ಮಹಿಳೆಯಾಗಿದ್ದಾಳೆ .
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮಂಜುನಾಥ (25), ಪ್ರಹ್ಲಾದ ಯಾನೆ ಪ್ರಭು (19),ಸಂಜೀವ(22) ರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಗುರುವಾರ ರಾತ್ರಿ 11:30 ಗಂಟೆಗೆ ಮದ್ಯದ ನಶೆಯಲ್ಲಿ ಈ ಮೂವರು ಮಕ್ಕಳು ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಜಗಳ ಮಾಡಿಕೊಂಡಿದ್ದಾರೆ.
ಈ ಸಂದರ್ಭ ತಾಯಿ ಸುಮಿತ್ರ ಮನನೊಂದು ಕೋಣೆಯ ಪಕ್ಕಾಸಿನಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪಣಂಬೂರು ಎಸಿಪಿ, ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಕೂಡಲೇ ಮೂವರು ಆರೋಪಿಗಳನ್ನು ಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.