LATEST NEWS
ರಾಮಮಂದಿರ ನಿರ್ಮಾಣಕ್ಕೆ ಒಂದೂ ಪೈಸೆಯನ್ನು ಕೊಡಬೇಡಿ. ಅದು ರಾಮಮಂದಿರ ಅಲ್ಲ, ಆರ್‌ಎಸ್‍ಎಸ್ ಮಂದಿರ
ಮಂಗಳೂರು: ರಾಮಮಂದಿರ ನಿರ್ಮಾಣಕ್ಕೆ ಒಂದೂ ಪೈಸೆಯನ್ನು ಕೊಡಬೇಡಿ. ಅದು ರಾಮಮಂದಿರ ಅಲ್ಲ, ಆರ್‌ಎಸ್‍ಎಸ್ ಮಂದಿರ ಎಂದು ಪಿಎಫ್‍ಐ ಪ್ರಧಾನ ಕಾರ್ಯದರ್ಶಿ ಅನಿಸ್ ಅಹಮ್ಮದ್ ಸಮಾವೇಶವೊಂದರಲ್ಲಿ ನೀಡಿರುವ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಉಳ್ಳಾಲದಲ್ಲಿ ಎರಡು ದಿನಗಳ ಹಿಂದೆ ನಡೆದ ‘ಯುನಿಟಿ ಮಾರ್ಚ್’ನಲ್ಲಿ ಪಿಎಫ್‌ಐ ಅನಿಸ್ ಅಹಮ್ಮದ್ ಮಾಡಿರುವ ಭಾಷಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಿಂದೂ ಸಮುದಾಯವದರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ರಾಮಮಂದಿರ ದೇಣಿಗೆ ಸಂಗ್ರಹಿಸಲು ನಿಮ್ಮ ಮನೆ ಬಾಗಿಲಿಗೆ ಬಂದರೆ ಹಣ ಕೊಡಬೇಡಿ’ ಎಂದು ಮುಸ್ಲಿಮರಿಗೆ ಹೇಳಿದ್ದಾರೆ. ‘ದೇಶದಲ್ಲಿ ಶಾಂತಿ ಸ್ಥಾಪನೆಗೆ ಬಾಬ್ರಿ ಮಸೀದಿ ಜಾಗ ಬಿಟ್ಟು ಕೊಡಿ ಎಂದಿದ್ದರು. ಈಗ ಜಾಗ ಬಿಟ್ಟು ಕೊಟ್ಟಾಯ್ತು. ಆದರೆ ದೇಶದಲ್ಲಿ ಶಾಂತಿ ಸ್ಥಾಪನೆ ಆಯ್ತಾ? ಇನ್ನೂ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಹಿಂದೂ ವಿರೋಧಿ ಸಂಘಟನೆ ನಮ್ಮದಲ್ಲ, ಆರ್ಎಸ್‍ಎಸ್ ಹಿಂದೂ ವಿರೋಧಿ ಸಂಘಟನೆ’ ಎಂದು ಹೇಳಿದ್ದಾರೆ.
ದೇಶದಲ್ಲಿರೋ ಆರ್‍ಎಸ್‍ಎಸ್ ಕ್ಯಾನ್ಸರ್ ಇದ್ದ ಹಾಗೆ ಅದು ವಾಸಿ ಆಗಲ್ಲ. ಆಗಾಗ ದೇಶದ ಶಾಂತಿಯನ್ನ ಕದಡುವ ಕೆಲಸ ಮಾಡುತ್ತಿದೆ. ಹಿಂದೂ ವರ್ಸಸ್ ಮುಸ್ಲಿಂ ಅಲ್ಲ, ಮುಸ್ಲಿಂ ವರ್ಸಸ್ ಆರ್‍ಎಸ್‍ಎಸ್ ಪರಿಸ್ಥಿತಿ ನಿರ್ಮಾಣ ಆಗ್ತಿದೆ. ಪಿಎಫ್‍ಐನ ದುಷ್ಮನ್ ಏನೇ ಇದ್ದರೂ ಆರ್‍ಎಸ್‍ಎಸ್ ಮಾತ್ರ. ನಿಮ್ಮಲ್ಲಿರೋ ಪ್ರತಿ ಆರ್‍ಎಸ್‍ಎಸ್ ನಾಯಕರನ್ನೂ ಗುರುತಿಸಿ ಇಟ್ಕೊಳ್ಳಿ ಎಂದು ಧಮ್ಕಿ ಭಾಷಣ ಮಾಡಿದ್ದಾರೆ.
ಕೋಮುಪ್ರಚೋದನಾಕಾರಿ ಭಾಷಣ ಮಾಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಉಳ್ಳಾಲದಲ್ಲಿ ಪಿಎಫ್‌ಐ ಮುಖಂಡರು ನೀಡಿರುವ ಹೇಳಿಕೆ ದೇಶ ವಿರೋಧಿ ಮತ್ತು ಅಸಂವಿಧಾನಿಕ ಎಂದರು.
ದೇಶದ ಜನತೆಯನ್ನು ಒಡೆಯುವ ಪ್ರಯತ್ನದ ಹೇಳಿಕೆಗಳನ್ನು ಪಿಎಫ್‌ಐ ಮುಖಂಡರು ನೀಡಿದ್ದಾರೆ. ಆರ್‌ಎಸ್‌ಎಸ್ ವಿರುದ್ಧ ಮಾತನಾಡಿದ್ದಾರೆ. ಆರ್ ಎಸ್ ಎಸ್ ಸಂಘಟನೆ ಒಂದು ದೇಶಭಕ್ತಿಯ ಪ್ರತೀಕ, ರಾಮ ಮಂದಿರ ನಿರ್ಮಿಸುವಂತೆ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆ ಬಗ್ಗೆ ಪಿಎಫ್‌ಐ ನಾಯಕರು ಮಾತನಾಡಿರುವುದು ಆಕ್ಷೇಪಾರ್ಹ ಎಂದಿದ್ದಾರೆ.