Connect with us

    DAKSHINA KANNADA

    “ಜೀವ ಕಂಟಕವಾಗುತ್ತಿರುವ ಸಿಟಿ ಬಸ್ ಅಟಾಟೋಪಗಳಿಗೆ ಕಡಿವಾಣ ಹಾಕಿ”-ಮಂಗಳೂರು ಪೊಲೀಸ್ ಕಮಿಷನರ್ ಸೂಚನೆ.!

    ಜೀವಕಂಟಕವಾಗುತ್ತಿರುವ ಸಿಟಿ ಬಸ್ ಗಳ ಅಟಾಟೋಪಗಳಿಗೆ ಕಡಿವಾಣ ಹಾಕಲು ಬಸ್ ಮಾಲಕರೊಂದಿಗೆ ಸಭೆ ನಡೆಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಖಡಕ್ ವಾರ್ನಿಂಗ್ ನೀಡಿದರು.

    ಮಂಗಳೂರು: ಜೀವಕಂಟಕವಾಗುತ್ತಿರುವ ಸಿಟಿ ಬಸ್ ಗಳ ಅಟಾಟೋಪಗಳಿಗೆ ಕಡಿವಾಣ ಹಾಕಲು ಬಸ್ ಮಾಲಕರೊಂದಿಗೆ ಸಭೆ ನಡೆಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಖಡಕ್ ವಾರ್ನಿಂಗ್ ನೀಡಿದರು.

    ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬುಧವಾರ ನಡೆದ ಈ ಸಭೆಯಲ್ಲಿ ಆರ್ ಟಿ ಒ ಅಧಿಕಾರಿ, ಮನಪಾ ಇಂಜಿನಿಯರ್, ಎನ್ಎಚ್ಒ ಅಧಿಕಾರಿ, ಸ್ಮಾರ್ಟ್ ಸಿಟಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಿಟಿ ಬಸ್ ಗಳೊಂದಿಗೆ ಸಭೆ ನಡೆಸಲಾಗಿದೆ.

    ಬಸ್ ಮಾಲಕರೊಂದಿಗೆ ಬಹಳಷ್ಟು ಸಭೆಗಳು ನಡೆದಿದ್ದರೂ, ಇದೇ ಮೊದಲ ಬಾರಿಗೆ ಕಳೆದ ಕೆಲದಿನಗಳಲ್ಲಿ ನಡೆದಿರುವ ಅಪಘಾತಗಳನ್ನು, ಅಡ್ಡಾದಿಡ್ಡಿ ಬಸ್ ಗಳ ಸಂಚಾರ, ನಿರ್ಲಕ್ಷ್ಯದ ಚಾಲನೆಗಳ ಬಗ್ಗೆ ವೀಡಿಯೋ ಮೂಲಕ ಬಸ್ ಮಾಲಕರಿಗೆ ಮನದಟ್ಟು ಮಾಡಲಾಯಿತು.

    ಇತ್ತೀಚಿಗೆ ನಡೆದ ವಿವಿಧ ಭೀಕರ ಅಪಘಾತಗಳ ವೀಡಿಯೋಗಳನ್ನು ತೋರಿಸಿ ಬಸ್ ಮಾಲೀಕರಿಗೆ ಕಮಿಷನರ್ ಕ್ಲಾಸ್ ತೆಗೆದುಕೊಂಡರು.

    ಅತಿವೇಗದ ಚಾಲನೆ, ನಿರ್ಲಕ್ಷ್ಯದ ಚಾಲನೆ, ಟೈಮ್ ಕೀಪಿಂಗ್ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆ ಬಗ್ಗೆ ಎಚ್ಚರಿಕೆ ನೀಡಿ, ಬಸ್ ಟೈಮಿಂಗ್ ರೇಷನಲೈಜ್ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

    ಬಸ್ ಮಾಲಕರು ತಮ್ಮ ಚಾಲಕ ಹಾಗೂ ನಿರ್ವಾಹಕರಿಗೆ ಸ್ಪಷ್ಟ ಎಚ್ಚರಿಕೆ ನೀಡಬೇಕು. ಇಲ್ಲವಾದಲ್ಲಿ ಚಾಲಕರ ಚಾಲನ ಪರವಾನಿಗೆ ರದ್ದು ಮಾಡಲಾಗುವುದು.

    ಈ ವರ್ಷ ಸುಮಾರು 90 ಮಂದಿಯ ಚಾಲನ ಪರವಾನಿಗೆ ರದ್ದು ಮಾಡಲಾಗಿದೆ.

    ಮುಂದೆ ಪರಿಸ್ಥಿತಿ ಇದೆ ರೀತಿ ಮುಂದುವರೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಫುಟ್ ಬೋರ್ಡ್ ಮೇಲೇ ಪ್ರಯಾಣಿಕರು ನಿಲ್ಲಲು ಅವಕಾಶ ನೀಡಬಾರದು.

    ಫುಟ್ ಬೋರ್ಡ್ ಗೆ ಬಾಗಿಲು ಹಾಕುವ ಬಗ್ಗೆ ಚಿಂತನೆ ನಡೆಸಬೇಕು. ಸಾರ್ವಜನಿಕರಲ್ಲೂ ಜಾಗೃತಿ ಮೂಡಿಸುವ ಕೆಲಸ ಆಗಬೇಕು.

    ಬಸ್ ಮಾಲಕರಿಗೆ ಅವಶ್ಯವಿರುವ ಕಡೆಗೆ ನಾವೇ ಹೋಮ್ ಗಾರ್ಡ್ಸ್ ವ್ಯವಸ್ಥೆ ಅಳವಡಿಸಲಾಗುತ್ತದೆ‌‌ ಎಂದು ಪೊಲೀಸ್ ಕಮಿಷನರ್ ಹೇಳಿದರು.

    ಅಲ್ಲದೆ ರಸ್ತೆ ಕಾಮಗಾರಿಯಿಂದಾಗಿ ಅಪಘಾತ ಸಂಭವಿಸಿದ್ದು ಹೌದಾದಲ್ಲಿ ಆ ಕಾಮಗಾರಿ ನಡೆಸುತ್ತಿರುವ ಇಂಜಿನಿಯರ್ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

    ಈ ಸಭೆಯಲ್ಲಿ ಚರ್ಚಿಸಲಾಗಿರುವ ವಿವಿಧ ಸಮಸ್ಯೆಗಳು ಪರಿಹಾರ ಕಾಣುವಂತಾಗಬೇಕು.

    ಮುಂದಿನ ತಿಂಗಳು ಮತ್ತೆ ಸಭೆ ಕರೆದು ಪರಿಶೀಲಿಸಲಾಗುವುದು. ಆದ್ದರಿಂದ ಆದಷ್ಟು ಶೀಘ್ರ ಇಂದು ನಿರ್ಣಯಿಸಿದ ವಿಚಾರ ತುರ್ತು ಕಾರ್ಯರೂಪಕ್ಕೆ ಬರುವಂತಾಗಬೇಕು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಸೂಚನೆ ನೀಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply