Connect with us

    LATEST NEWS

    ಅಡ್ಡೂರು ಅಕ್ರಮ ಮರಳು ಅಡ್ಡೆಗೆ ಮಂಗಳೂರು ಪೊಲೀಸರ ದಾಳಿ -2 ಟಿಪ್ಪರ್ ಸಹಿತ 15 ದೋಣಿ ವಶಕ್ಕೆ..!

    ಮಂಗಳೂರು ತಾಲೂಕಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಶನಿವಾರ ನಸುಕಿನ ವೇಳೆ ಬಜ್ಪೆ ಪೊಲೀಸರು ದಾಳಿ ನಡೆಸಿದ್ದಾರೆ.

    ಮಂಗಳೂರು : ಮಂಗಳೂರು ತಾಲೂಕಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಶನಿವಾರ ನಸುಕಿನ ವೇಳೆ ಬಜ್ಪೆ ಪೊಲೀಸರು ದಾಳಿ ನಡೆಸಿದ್ದಾರೆ.

    ದಾಳಿ ಸಂದರ್ಭ ಸ್ಥಳದಲ್ಲಿದ್ದ ಎರಡು ಟಿಪ್ಪರ್ ಲಾರಿಗಳ‌ ಸಹಿತ 15 ದೋಣಿಗಳನ್ನು ವಶಕ್ಕೆ ಪಡೆದಿದ್ದಾರೆ.

    ಗುರುಪುರ ಫಲ್ಗುಣಿ ನದಿಯ ತಟದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿಯ ಮೇರೆಗೆ ಬಜ್ಪೆ ಪೊಲೀಸರು ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ಈ ಕಾರ್ಯಾಚರಣೆ‌ ಕೈಗೊಂಡಿದ್ದಾರೆ.

    ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ ಗೋಯೆಲ್ ಅವರ ನೇತ್ರತ್ವದಲ್ಲಿ ಬಜ್ಪೆ ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    ಕಾರ್ಯಾಚರಣೆಯ ವೇಳೆ ಸ್ಥಳದಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿದ್ದ ತಲಾ 5ಲಕ್ಷ ರೂ. ಮೌಲ್ಯದ ಎರಡು ಟಿಪ್ಪರ್ ಲಾರಿಗಳು, ತಲಾ 50 ಸಾವಿರ ರೂ. ಮೌಲ್ಯದ 15 ದೋಣಿಗಳು ಹಾಗೂ ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ ಸೊತ್ತು ಗಳು ಸೇರಿ ಒಟ್ಟು 17.50 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply