Connect with us

    LATEST NEWS

    ಪರವಾನಗಿ ಇಲ್ಲದೆ 1500 ಕೆಜಿ ಸ್ಪೋಟಕ ಸಾಮಾಗ್ರಿ ದಾಸ್ತಾನು – ಓರ್ವ ಅರೆಸ್ಟ್

    ಮಂಗಳೂರು ಅಗಸ್ಟ್ 16: ಪರವಾನಗಿ ಇಲ್ಲದೆ 1,500 ಕೆ.ಜಿ.ಗೂ ಅಧಿಕ ಅಪಾಯಕಾರಿ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿರುವ ಘಟನೆ ಬಂದರ ನಲ್ಲಿ ನಡೆದಿದೆ.


    ಬಂಧಿತನನ್ನು ಬಂಟ್ವಾಳ ತಾಲ್ಲೂಕು ಮುಡಿಪು ಕೈರಂಗಳ ನಿವಾಸಿ ಆನಂದ ಗಟ್ಟಿ (50) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಬಂದರ್‌ನ ಗಾಂಧಿ ಸನ್ಸ್ ಕಟ್ಟಡದ ಕೊಠಡಿಯೊಂದರಲ್ಲಿ ಅಕ್ರಮವಾಗಿ 400 ಕೆ.ಜಿ. ಸಲ್ಫರ್ ಪೌಡರ್, 350 ಕೆ.ಜಿ. ಪೊಟ್ಯಾಷಿಯಂ ನೈಟ್ರೇಟ್, 50 ಕೆ.ಜಿ. ಬ್ಯಾರಿಯಂ ನೈಟ್ರೇಟ್, 395 ಕೆ.ಜಿ. ಪೊಟ್ಯಾಷಿಯಂ ಕ್ಲೊರೈಟ್, 260 ಕೆ.ಜಿ. ತೂಕದ ವಿವಿಧ ಬಗೆಯ ಅಲ್ಯುಮಿನಿಯಂ ಪೌಡರ್, 30 ಕೆ.ಜಿ. ಲೀಡ್ ಬಾಲ್ಸ್, 240 ಕೆ.ಜಿ. ಚಾರ್ಕೊಲ್, 100 ಏರ್‌ ರೈಲ್‌ಗಳನ್ನು ಒಳಗೊಂಡ 140 ಪಿಲೆಟ್ಸ್ ಪ್ಯಾಕೇಟ್, 100 ಏರ್ ರೈಲ್‌ಗಳನ್ನು ಒಳಗೊಂಡ 21 ಪಿಲೆಟ್ಸ್ ಪ್ಯಾಕೇಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು 1,500 ಕೆ.ಜಿ. ತೂಕದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ₹ 1.11 ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಮಾತನಾಡಿದರು. ಆರೋಪಿಯು ನಗರದಲ್ಲಿ ಗನ್ ಶಾಪ್ ಹೊಂದಿದ್ದ. ಆದರೆ, ಯಾವುದೇ ಪರವಾನಗಿ ಇಲ್ಲದೆ ಈ ಸ್ಫೋಟಕ ಸಾಮಗ್ರಿಗಳನ್ನು ಖಾಸಗಿಯಾಗಿ ದಾಸ್ತಾನು ಮಾಡಿದ್ದ. ಆ ಕಟ್ಟಡದಲ್ಲಿ ಮೇಲಿನ ಮಹಡಿಯಲ್ಲಿ ವಸತಿ ಸಮುಚ್ಚಯವಿದ್ದು, 20-30 ಕುಟುಂಬಗಳು ವಾಸವಿದೆ. ಬಹಳಷ್ಟು ಮಂದಿ‌ ಮಕ್ಕಳು ಅದೇ ಪರಿಸರದಲ್ಲಿ ಓಡಾಟ ನಡೆಸುತ್ತಿದ್ದಾರೆ. ಅಚನಕ್ಕಾಗಿ ಸ್ಫೋಟಗೊಂಡಲ್ಲಿ ಅಪಾಯ ಎದುರಾಗುವ ಸಾಧ್ಯತೆ ಇದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *