Connect with us

    DAKSHINA KANNADA

    ಅಕ್ರಮ ದನ ಸಾಗಾಟದ ಸದಸ್ಯರ ಕೊಲೆಗೆ ಸಂಚು – ಇಬ್ಬರು ಕುಖ್ಯಾತ ರೌಡಿಗಳ ಅರೆಸ್ಟ್

    ಮಂಗಳೂರು, ಸೆಪ್ಟೆಂಬರ್ 28: ಮಂಗಳೂರಿನ ಅಡ್ಯಾರ್ ಪರಿಸರದಲ್ಲಿ ಅಕ್ರಮ ದನ ಸಾಗಾಟ ಮಾಡುತ್ತಿದ್ದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಬಂಧಿತರನ್ನು ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್ @ ಗರುಡ ತಸ್ಲೀಮ್(34), ಹೈದರಾಲಿ @ ಹೈದು(26) ಎಂದು ಗುರುತಿಸಲಾಗಿದೆ.


    ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ತಂಡವೊಂದು ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಮತ್ತೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳನ್ನು ಬಂಧಿಸಿ ಅವರಿಂದ ತಲವಾರು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ವಾಹನ ವಶಪಡಿಸಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


    ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆ ನಡೆದಿತ್ತು. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಆನಂತರ, ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.

    ಆರೋಪಿಗಳ ಪೈಕಿ ತಸ್ಲೀಮ್ @ ಗರುಡ ತಸ್ಲೀಮ್ ಎಂಬಾತ ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೇ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದ. 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದ. ಇನ್ನೋರ್ವ ಆರೋಪಿ ಹೈದರಾಲಿ @ಹೈದು ಎಂಬಾತ ಈ ಹಿಂದೆ ಮೂಡಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.

     

    Share Information
    Advertisement
    Click to comment

    Leave a Reply

    Your email address will not be published. Required fields are marked *