Connect with us

DAKSHINA KANNADA

ಮಂಗಳೂರು :ಕದ್ರಿ ಕರ್ನಾಟಕ ಒನ್ ಕಚೇರಿ ಅವ್ಯವಸ್ಥೆ ಖಂಡಿಸಿ ಸಾಮಾಜಿಕ ಹೋರಾಟಗಾರ ಜೆರಾಲ್ಡ್ ಟವರ್ಸ್ ವಿಭಿನ್ನ ಪ್ರತಿಭಟನೆ..!

ಮಂಗಳೂರು : ಸರಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ನಾನಾ ರೀತಿಯ ರೀತಿಯ ಸೌಲಭ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯ ಮಾಡುತ್ತಿರುವ ಮಂಗಳೂರು ನಗರದ ಕದ್ರಿಯ ಕರ್ನಾಟಕ ಒನ್ ಕಚೇರಿಯಲ್ಲಿ ಕೆಲಸ ಕಾರ್ಯಗಳಿಗೆ ಹೋಗುವವರಿಗೆ ಗ್ಯಾರಂಟಿ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಅದರಲ್ಲೂ ಹಿರಿ ಜೀವಿಗಳಿಗೆ ಈ ಕಛೇರಿ ಹೊಕ್ಕರೆ ಉಸಿರಾಟ ಸಮಸ್ಯೆಯಿಂದ ಜೀವಕ್ಕೆ ಸಂಚಕಾರ ಕೂಡ ಇದೆ. ಅವ್ಯವಸ್ಥೆಯ ಆಗರ ವಾಗಿರುವ ಈ ಕೇಂದ್ರ ವಿರುದ್ದ ಸಾಮಾಜಿಕ ಕಾರ್ಯಕರ್ತ ಜೆರಾರ್ಡ್ ಟವರ್ಸ್ ಶನಿವಾರ ಕಚೇರಿಯಲ್ಲೇ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿ ಗಮನ ಸೆಳೆದರು.

ಬಿಲ್ ಪಾವತಿಗಾಗಿ ಕಚೇರಿ ಒಳ ಹೋದ ಜೆರಾರ್ಡ್ ಟವರ್ಸ್ ಅವರು ಸೂಕ್ತ ಗಾಳಿಯ (ವೆಂಟಿಲೇಶನ್) ವ್ಯವಸ್ಥೆ ಇಲ್ಲದೆ ಮೂರ್ಚೆ ಹೋದಾಗ ಅಲ್ಲಿದ್ದ ಸಾರ್ವಜನಿಕರು ಅವರನ್ನು ನೀರು ಕುಡಿಸಿ ಉಪಚರಿಸಿದರು.

ಸಾಮಾಜಿಕ ಹೋರಾಟಗಾರ ಜಿ.ಕೆ. ಭಟ್ ಅವರೂ ಸಾಥ್ ನೀಡಿದರು ಬಳಿಕ ಮಾತನಾಡಿದ ಜೆರಾಲ್ಡ್ ನಾನು ಜನರ ಸಮಸ್ಯೆಗಳಿಗಾಗಿ ಇಂದು ಮೂರ್ಛೆ ಹೋಗುವ ನಾಟಕ ಆಡಬೇಕಾಗಿ ಬಂತು. ಈ ಕಚೇರಿಯಲ್ಲಿ ಕಳೆದ ಹಲವು ಸಮಯದಿಂದ ಹಲವಾರು ಮಂದಿ ಇದೇ ರೀತಿ ನೈಜವಾಗಿ ಮೂರ್ಛೆ ಹೋದಾಗ ನಾನು ಸೇರಿದಂತೆ ಹಲವು ಸಾರ್ವಜನಿಕರು ಉಪಚರಿಸಿದ್ದೇವೆ. ಇಲ್ಲಿನ ಅವ್ಯವಸ್ಥೆಯ ಬಗ್ಗೆ ಕಳೆದ ಸುಮಾರು ನಾಲ್ಕೈದು ತಿಂಗಳಿನಿಂದ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಕ್ರಮವಾಗಿಲ್ಲ’ ಎಂದು ಜೆರಾರ್ಡ್ ಟವರ್ಸ್ ಬಳಿಕ ಸುದ್ದಿಗಾರರ ಜತೆ ತಮ್ಮ ಅನಿಸಿಕೆ ಹಂಚಿಕೊಂಡರು.

ಕಚೇರಿಯ ಎಸಿ ಹಾಳಾಗಿ ಸುಮಾರು 10 ತಿಂಗಳು ಕಳೆದಿದೆ. ಕಚೇರಿಯಲ್ಲಿ ಪ್ರಾಕೃತಿಕ ಗಾಳಿ ಬರಲು ಕಿಟಕಿಗಳೇ ಇಲ್ಲ. ಇಲ್ಲಿ ದಿನವೊಂದಕ್ಕೆ ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಮಹಿಳೆಯರು, ವಿಕಲಚೇತನರು ಸೇರಿದಂತೆ ನೂರಾರು ಮಂದಿ ನಿತ್ಯ ನಾನಾ ರೀತಿಯ ಕೆಲಸ ಕಾರ್ಯಗಳಿಗೆ ಆಗಮಿಸುತ್ತಾರೆ.

ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಯ ಸಂದರ್ಭದಲ್ಲಿ ದಿನದಲ್ಲಿ ಗಂಟೆಯೊಂದಕ್ಕೆ ಸುಮಾರು 300ರಷ್ಟು ಮಂದಿ ಇಲ್ಲಿ ಅರ್ಜಿ ಸಲ್ಲಿಸುವುದನ್ನು ಕಂಡಿದ್ದೇನೆ. ಹಾಗಿದ್ದರೂ ಇಲ್ಲಿ ಕುಡಿಯಲು ನೀರಿಲ್ಲ. ಸೂಕ್ತ ಶೌಚಾಲಯ ವ್ಯವಸ್ಥೆ ಇಲ್ಲ. ಬರೆಯಲು ಟೇಬಲ್ ವ್ಯವಸ್ಥೆ ಇಲ್ಲ. ಕಚೇರಿ ಹೊರಗಡೆ ಸ್ವಚ್ಛತೆ ಇಲ್ಲ’ ಎಂದು ಆರೋಪಿಸಿದರು.

ಕದ್ರಿಯ ಈ ಕರ್ನಾಟಕ ಒನ್ ಕಚೇರಿಯಲ್ಲಿನ ಎಸಿ ಹಾಳಾಗಿರುವ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದು ಮೂರು ತಿಂಗಳಾದರೂ ಕ್ರಮವಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *