Connect with us

    DAKSHINA KANNADA

    ಮಂಗಳೂರು : ರಾಜ್ಯ ಸರ್ಕಾರದ ಮಹತ್ವದ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

    ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ ಅವರು ಚಾಲನೆ ನೀಡಿದರು.

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ ಅವರು ಚಾಲನೆ ನೀಡಿದರು.

    ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಹಿಳಾ ಮತ್ತು ‌ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಭೋವಿ, ಡಿಯುಡಿಸಿ ಯೋಜನಾ ನಿರ್ದೇಶಕ ಅಭಿಷೇಕ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು.

    ನಂತರ ಮೈಸೂರಿನಿಂದ ನೇರ ಪ್ರಸಾರವಾಗುತ್ತಿದ್ದ ಗೃಹ ಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ವೀಕ್ಷಿಸಿದರು.

    ನೂರಾರು ಸಂಖ್ಯೆಯ ಫಲಾನುಭವಿಗಳು ಹಾಗೂ ಸಾರ್ವನಿಕರು ಭಾಗವಹಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply