DAKSHINA KANNADA
ಮಂಗಳೂರು : ಕಾಂಗ್ರೆಸ್ ಪ್ರತಿಭಟನೆ ವೇಳೆ ಬಸ್ಸಿಗೆ ಕಲ್ಲು ತೂರಾಟ, ಮೂವರ ಬಂಧನ ಉಳಿದವರಿಗೆ ಮುಂದುವರೆದ ಶೋಧ
ಮಂಗಳೂರು: ಆಗಸ್ಟ್ 19 : ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಖಾಸಾಗಿ ಬಸ್ ಗೆ ಕಲ್ಲು ತೂರಾಟ ಮಾಡಿದ ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಶಾಹುಲ್ ಹಮೀತ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತರು. ಇನ್ನು ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈ ಸಂಬಂಧ ನಗರದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕರ್ನಾಟಕ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದನ್ನು ವಿರೋಧಿಸಿ ಮಂಗಳೂರು ಜಿಲ್ಲಾ ಕಾಂಗ್ರೆಸ್ ಸದಸ್ಯರು ನಗರದ ಪಾಲಿಕೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಟ್ರಾಫಿಕ್ ಸಿಗ್ನಲ್ ಬಳಿ KA 19 C 7266 ನಂಬರದ ಬಸ್ ಪ್ರಯಾಣಿಕರನ್ನು ಸಾಗಿಸುತ್ತಿದ್ದಾಗ ಸುಮಾರು 10-15 ಜನರ ತಂಡ ಬಸ್‌ಗೆ ಅಡ್ಡಗಟ್ಟಿ ಕಲ್ಲು ತೂರಿದ್ದಾರೆ. ಈ ದಾಳಿಯಲ್ಲಿ ಬಸ್ಸಿನ ಮುಂಭಾಗದ ಗಾಜು ಪುಡಿಪುಡಿಯಾಗಿದ್ದು ಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ. ಈ ಘಟನೆ ಸಂಬಂಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login